JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, December 31, 2023

Recruitment Notification of Taluk Incharge Officers

  Jnyanabhandar       Sunday, December 31, 2023

Recruitment Notification of Taluk Incharge Officers

ರಾಜ್ಯದ ಎಲ್ಲಾ ತಾಲೂಕುಗಳ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಬೌದ್ಧಿಕ ಪ್ರಗತಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು, ಮೇಲುಸ್ತುವಾರಿ ನೋಡಿಕೊಳ್ಳಲು ಕರ್ನಾಟಕ ಆಡಳಿತ ಸೇವೆಯ (ಕೆಎಎಸ್‌) ಅಧಿಕಾರಿಗಳನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿಗಳಾನ್ನಾಗಿ ನಿಯೋಜನೆ ಮಾಡಲಾಗಿದೆ.

ಗ್ಯಾರಂಟಿ ಯೋಜನೆಗಳ ಪರಿಶೀಲನೆ, ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡುವುದು, ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶ್ರಮಿಸುವುದು. ಕುಂದು-ಕೊರತೆಗಳನ್ನು ಸರ್ಕಾರದ ಗಮನಕ್ಕೆ ತರುವುದು, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಮಕ್ಕಳಿಗೆ ನೀಡುವ ಪೌಷ್ಟಿಕಾಂಶ ವಿತರಣೆಯ ನಿರ್ವಹಣೆ ಮಾಡುವುದು, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಜಲಮೂಲಗಳ ಜೀರ್ಣೋದ್ಧಾರ, ಬಿತ್ತನೆಬೀಜ, ಗೊಬ್ಬರ ವಿತರಣೆ, ಉದ್ಯೋಗ ಖಾತ್ರಿ ಕಾಮಗಾರಿ, ಪಿಂಚಣಿ ಸೌಲಭ್ಯಗಳ ಪ್ರಗತಿ ಪರಿಶೀಲನೆ ನಡೆಸುವುದು, ದೌರ್ಜನ್ಯ ಪ್ರಕರಣಗಳನ್ನು ತಡೆಯುವುದೂ ಸೇರಿದಂತೆ 13 ವಿಚಾರಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ನಿಯೋಜನೆಗೊಂಡ ತಾಲ್ಲೂಕಿಗೆ ತಿಂಗಳಿಗೆ ಕನಿಷ್ಠ ಎರಡು ಬಾರಿ ಭೇಟಿ ನೀಡಬೇಕು. ಪರಿಶೀಲನಾ ವರದಿಯನ್ನು ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಲಾಗಿದೆ.

ಹೀಗಿದೆ ತಾಲ್ಲೂಕು ಉಸ್ತುವಾರಿ ಅಧಿಕಾರಿಗಳ ಕಾರ್ಯಗಳು

1.ತಾಲೂಕು ಉಸ್ತುವಾರಿ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳು

1. ಸರ್ಕಾರವು ನೂತನವಾಗಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ (ಗೃಹಲಕ್ಷ್ಮಿ ಗ್ರಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ) ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವುದು.

2. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ, ನ್ಯೂನತೆಗಳನ್ನು ಸರಿಪಡಿಸಲು ಕ್ರಮವಹಿಸುವುದು.

3. ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಾಲೆ, ಕಾಲೇಜು ಹಾಗೂ ಐಟಿಐ ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅಧ್ಯಯಿಸಿ, ಸೂಕ್ತ ಪರಿಹಾರ ಕಂಡುಕೊಳ್ಳುವುದು ಹಾಗೂ ಶಾಲಾ ಕಟ್ಟಡ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಇತ್ಯಾದಿ ಕಾಮಗಾರಿಗಳ ಪರಿಶೀಲನೆ ನಡೆಸುವುದು.

4. ಸ್ವಂತ ಕಟ್ಟಡ ಇಲ್ಲದಿರುವ ಅಂಗನವಾಡಿಗಳಿಗೆ ನಿವೇಶನವನ್ನು ಒದಗಿಸುವ ಬಗ್ಗೆ ಪರಿಶೀಲನ ಹಾಗೂ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪರಿಶೀಲಿಸುವುದು ಹಾಗೂ ತಾಲ್ಲೂಕಿನಲ್ಲಿರುವ ಅಪೌಷ್ಟಿಕ ಮಕ್ಕಳ ವಿವರ ಪಡೆದು ನಿರಂತರವಾಗಿ ಸರ್ಕಾರದ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಕ್ರಮವಹಿಸುವುದು.

5. ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ಜಲಸಂಪನ್ಮೂಲ, ಲೋಕೋಪಯೋಗಿ, ಕೃಷಿ, ತೋಟಗಾರಿಕೆ ಇಲಾಖೆಗಳಲ್ಲಿನ ಪ್ರಮುಖ ಕಾರ್ಯಕ್ರಮಗಳಾದ ಕುಡಿಯುವ ನೀರು, ರಸ್ತೆಗಳು, ವಿದ್ಯುಚ್ಛಕ್ತಿ, ಮೇವು ಲಭ್ಯತೆ, ಬೀಜ ಮತ್ತು ರಸಗೊಬ್ಬರ, ಮಧ್ಯಾಹ್ನದ ಬಿಸಿಯೂಟ, ನರೇಗಾ, ಸಾಮಾಜಿಕ ಭದ್ರತೆಯಡಿ ನೀಡುತ್ತಿರುವ ಪಿಂಚಣಿ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸುವುದು.
6. ತಾಲ್ಲೂಕಿನ ಯುವಕರಿಗೆ ಉದ್ಯೋಗಾಧಾರಿತ ತರಬೇತಿ ಕುರಿತು ಸಮನ್ವಯ ಹಾಗೂ ಸಾಲ ಮಂಜೂರಾತಿಗೆ ಬೇಕಾದ ಅವಶ್ಯ ಸಲಹೆ ನೀಡಲು ಕ್ರಮವಹಿಸುವುದು ಹಾಗೂ ತಾಲ್ಲೂಕಿನ ಯುವಕ-ಯುವತಿಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಅವರ ವೃತ್ತಿನೈಪುಣ್ಯತೆ (skill) ಹೆಚ್ಚಿಸಿ ಅವರ ಜೀವನೋಪಾಯವನ್ನು ಸಧೃಡಗೊಳಿಸಲು ಕ್ರಮವಹಿಸುವುದು.

7. ತಾಲ್ಲೂಕಿನಲ್ಲಿ ಗ್ರಹ ಮತ್ತು ಸಣ್ಣ ಕೈಗಾರಿಕೆಗಳನ್ನು ಗುರುತಿಸಿ, ಅವರಿಗೆ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಬಗ್ಗೆ ಕ್ರಮವಹಿಸುವುದು.
8. ಖಾಸಗಿ ಸಾಮಾಜಿಕ ಜವಾಬ್ದಾರಿ (Corporate Social Responsibility) ಯೋಜನೆಯಡಿಯಲ್ಲಿ ವಿವಿಧ ಕಂಪನಿಗಳಿಂದ ಶಾಸನಬದ್ಧವಾದ ಆರ್ಥಿಕ ಸಹಾಯ ಪಡೆದು ತಾಲ್ಲೂಕಿನ, ಶೈಕ್ಷಣಿಕ, ಆರೋಗ್ಯ, ಸ್ವಚ್ಛತೆ ಹಾಗೂ ನೈಸರ್ಗಿಕ ಕಾರ್ಯಗಳನ್ನು ನಿರ್ವಹಿಸಲು ಕ್ರಮವಹಿಸುವುದು. ಉದಾಹರಣೆಗೆ: ತಾಲ್ಲೂಕಿನ ಜಲಮೂಲಗಳ ಜೀರ್ಣೋದ್ಧಾರ ಮಾಡುವ ಬಗ್ಗೆ ಕ್ರಮವಹಿಸುವುದು.

9. ಪ್ರತಿ ಗ್ರಾಮ ಪಂಚಾಯತಿವಾರು ಕುಡಿಯುವ ನೀರಿನ ವ್ಯವಸ್ಥೆ, ಓವರ್‌ಹೆಡ್ ಟ್ಯಾಂಕ್‌ಗಳ ಸ್ವಚ್ಛತೆ ಮತ್ತು impounding reservoirs ಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವುದು ಹಾಗೂ ಅತಿವೃಷ್ಟಿ ಮತ್ತು ಅನಾವೃಷ್ಟಿಗಳಂತಹ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರಕೃತಿ ವಿಕೋಪಕ್ಕೀಡಾದ ಪ್ರದೇಶಗಳಲ್ಲಿ ತುರ್ತು ಕ್ರಮವಹಿಸುವುದು.

10. ತಾಲ್ಲೂಕಿನಲ್ಲಿ ದೌರ್ಜನ್ಯ ಪ್ರಕರಣಗಳನ್ನು ಪರಿಶೀಲಿಸಿ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸುವುದು.

11. ಪ್ರತಿ ತಾಲ್ಲೂಕಿಗೆ ಸಂಬಂಧಪಟ್ಟಂತೆ, ನಿಯೋಜಿಸಲ್ಪಟ್ಟ ಕೆ.ಎ.ಎಸ್. ಅಧಿಕಾರಿಯು ಪತಿ ಮಾಹೆ ಕನಿಷ್ಠ ಎರಡು ಬಾರಿ ಭೇಟಿ ನೀಡುವುದು. ಸದರಿ ಭೇಟಿ ಸಮಯದಲ್ಲಿ ಇಲಾಖೆಗಳ ಕಾರ್ಯ ಪರಿಶೀಲನೆ, ಇಲಾಖೆಗಳು ಕೈಗೊಂಡಿರುವ ವಿವಿಧ ಯೋಜನೆಗಳಡಿ ಅಭಿವೃದ್ಧಿ ಯೋಜನೆಗಳು ಸ್ಥಳವರಿಶೀಲನೆ ಮಾಡುವುದರೊಂದಿಗೆ ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು(ಪಂಚಾಯತ್) ತಯಾರಿಸುವ ಕ್ರಿಯಾಯೋಜನೆಗಳ ಪರಿಶೀಲನೆ ಮಾಡುವುದು ಹಾಗೂ ಸದರಿ ಕಾರ್ಯ ಯೋಜನೆಗಳನ್ನು ನಾಗರೀಕ ಸ್ನೇಹಮಯ ಮಾಡಲು ಸೂಕ್ತ ಸಲಹೆಗಳನ್ನು ನೀಡುವುದು, ಸರ್ಕಾರದ ಹಿತದೃಷ್ಟಿಗೆ ಧಕ್ಕೆಯಾಗದಂತಹ ರೀತಿಯಲ್ಲಿ ತಮ್ಮ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ತೆಗೆದುಕೊಳ್ಳುವುದು.

12. ತಾಲ್ಲೂಕು ಉಸ್ತುವಾರಿ ಅಧಿಕಾರಿಗಳು ಮೇಲ್ಕಂಡ ಕಾರ್ಯಗಳನ್ನು ಅತ್ಯಂತ ಬದ್ಧತೆಯಿಂದ ನಿರ್ವಹಿಸಲು ಸೂಚಿಸಿದೆ ಹಾಗೂ ಪ್ರತಿಮಾಹೆ ತಾವು ನಿರ್ವಹಿಸಿದ ಕಾರ್ಯವರದಿಯನ್ನು ಸರ್ಕಾರಕ್ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ಹಾಗೂ ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವುದು.

13. ತಾಲ್ಲೂಕು ಉಸ್ತುವಾರಿ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವುದು ಮತ್ತು ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಹಿಸುವ ಹೆಚ್ಚುವರಿ ಕಾರ್ಯಗಳನ್ನು ನಿರ್ವಹಿಸುವುದು.

30 ಜಿಲ್ಲೆಗಳ ಪ್ರತಿ ತಾಲೂಕಿನ ಉಸ್ತುವಾರಿ ಕೆಎಎಸ್ ಅಧಿಕಾರಿಗಳ ಪಟ್ಟಿಯನ್ನು ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ.



https://drive.google.com/file/d/13g5YmLp67jIOyjJz3jML3m6jo9B5-pNY/view?usp=drivesdk

https://acrobat.adobe.com/link/review?uri=urn:aaid:scds:US:1f91a8d6-6b56-3e35-b68f-b6343ed55c0c

logoblog

Thanks for reading Recruitment Notification of Taluk Incharge Officers

Previous
« Prev Post

No comments:

Post a Comment

If You Have any Doubts, let me Comment Here