JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, December 22, 2023

Regarding regularization of facility of encashment by applying earnings leave for the period of 2024

  Jnyanabhandar       Friday, December 22, 2023
Regarding regularization of facility of encashment by applying earnings leave for the period of 2024

2024ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅದ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ 

ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ನೀಡಿದೆ. 2024 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.

ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು ಸಿಕ್ಕಿದರೆ ಸಾಕಪ್ಪಾ!!! ಎಂದುಕೊಳ್ಳವವರೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ದಿನದ 24 ಗಂಟೆಯಲ್ಲಿ ಹೆಚ್ಚಿನ ಅವಧಿ ಆಫೀಸ್, ಕೆಲಸ ಎಂದು ಮನೆಯ ಕಡೆ ಹೆಚ್ಚು ಗಮನ ಕೊಡಲಾಗದೆ, ಮನೆಯವರೊಂದಿಗೆ ಕಾಲ ಕಳೆಯಲಾಗದೆ ಪರಿತಪಿಸುವಂತಾಗಿದೆ. ಆದರೆ, ಇದೀಗ, ನೌಕರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.

2024 ರ ಜನವರಿ 1ರಿಂದ ವರ್ಷ ಮುಗಿಯುವುದರೊಳಗಾಗಿ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣದ ಸೌಲಭ್ಯ ಪಡೆಯಬಹುದಾಗಿದ್ದು, ಇದಕ್ಕಾಗಿ ಒಂದು ತಿಂಗಳ ಮುಂಚಿತವಾಗಿ ನೋಟಿಸ್ ನೀಡುವುದು ಅವಶ್ಯಕವಾಗಿದೆ.

2023ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ,ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ , ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಗಳಿಕೆ ರಜೆ ಅಧರ್ಪಿಸಿ ನಗಧಿಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118 (2) (i) ರನ್ವಯ ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ 31-12-2023ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2024ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅದರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗಧಿಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ. 

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಿ.

logoblog

Thanks for reading Regarding regularization of facility of encashment by applying earnings leave for the period of 2024

Previous
« Prev Post

No comments:

Post a Comment

If You Have any Doubts, let me Comment Here