Karnataka Second PUC Annual Exam Tentative Time table 2024
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ದಿನಾಂಕ 01-12-2023 ರಂದು ಪ್ರಕಟಿಸಿದೆ. ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲಾರು ತಮ್ಮ ಕಾಲೇಜು ಪ್ರಕಟಣಾ ಪಲಕದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಮಂಡಳಿಯಿಂದ ಪ್ರಕಟಿಸಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 01-12-2023ರಿಂದ 15-12-2023ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ಆಕ್ಷೇಪಣೆಗಳನ್ನು ಮಂಡಳಿಯ ಇ-ಮೇಲ್ ವಿಳಾಸ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆರನೇ ಅಡ್ಡರಸ್ತೆ ಮಲ್ಲೇಶ್ವರಂ ಬೆಂಗಳೂರು 560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.
2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿದೆ.
No comments:
Post a Comment
If You Have any Doubts, let me Comment Here