DAR PC Important News
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(ಸಿಎಆರ್ ಮತ್ತು ಡಿಎಆರ್-ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿ: 28-01-2024 ರಂದು ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತದೆ.
ಆದ್ದರಿಂದ ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‌ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಬೇಟಿ ನೀಡಿ.
No comments:
Post a Comment
If You Have any Doubts, let me Comment Here