Final Schedule for Summative Assessment (SA-2) of Class 5, 8 and 9 students for the year 2023-24 has been announced.
ರಾಜ್ಯ ಸರ್ಕಾರವು ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಾಂಕನ ( SA-2) ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಇದೀಗ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5. 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ (Summative Assessment-(SA-2) ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವೆಬ್‌ಸೈಟ್‌ನಲ್ಲಿ https://kseab.karnataka.gov.in/ ನಲ್ಲಿ ಪ್ರಕಟಿಸಲಾಗಿದೆ.
ಮುಂದುವರೆದು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಹಾಗೂ ಎಲ್ಲಾ ಬ್ಲಾಕುಗಳ ಕ್ಷೇತ್ರಶಿಕ್ಷಣಾಧಿಕಾರಿಗಳು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರುಗಳಿಗೆ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಲು ತಿಳಿಸಿದೆ ಹಾಗೂ ಸದರಿ ಮೌಲ್ಯಾಂಕನ ಕುರಿತು ಸುತ್ತೋಲೆಯನ್ನು ಶೀಘ್ರದಲ್ಲಿಯೇ ನೀಡಲಾಗುವುದು ಎಂದು ತಿಳಿಸಲಾಗಿದೆ.
ಹೀಗಿದೆ 5, 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿ
ಹೀಗಿದೆ ಮಾರ್ಚ್-2024ರ 5ನೇ ತರಗತಿ ಮೌಲ್ಯಾಂಕನ ಕಾರ್ಯದ ತಾತ್ಕಾಲಿಕ ವೇಳಾಪಟ್ಟಿ
ದಿನಾಂಕ 11-03-2024ರ ಸೋಮವಾರ - ಪ್ರಥಮ ಭಾಷೆ - ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.
ದಿನಾಂಕ 12-03-2023ರ ಮಂಗಳವಾರ- ದ್ವಿತೀಯ ಭಾಷೆ - ಇಂಗ್ಲೀಷ್, ಕನ್ನಡ
ದಿನಾಂಕ 13-03-2024ರ ಬುಧವಾರ - ಕೋರ್ ವಿಷಯ - ಪರಿಸರ ಅಧ್ಯಯನ
ದಿನಾಂಕ 14-03-2024ರ ಗುರುವಾರ- ಕೋರ್ ವಿಷಯ - ಗಣಿತ
No comments:
Post a Comment
If You Have any Doubts, let me Comment Here