JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, January 12, 2024

Government Employees OPS Updates

  Jnyanabhandar       Friday, January 12, 2024
Government Employees OPS Updates

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಂದೆ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಈ ಕುರಿತು ಪರಿಶೀಲನೆ ನಡೆಸುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ರಾಜ್ಯಾಧ್ಯಕ್ಷ ಸಿ . ಎಸ್. ಷಡಾಕ್ಷರಿ ನೇತೃತ್ವದಲ್ಲಿ ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್. ಕೆ. ಅತೀಕ್‌ ಭೇಟಿ ಮಾಡಿದರು. ಸರ್ಕಾರದ ಮುಂದೆ ಹೊಸ ಬೇಡಿಕೆಯನ್ನು ಇಟ್ಟರು. Government Employee; NPS ಸದನದಲ್ಲಿ ಉತ್ತರ ಕೊಟ್ಟ ಸಿಎಂ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ ಸರ್ಕಾರಿ ನೌಕರರನ್ನು ಹಳೆಯ ಪಿಂಚಣಿ ಯೋಜನೆ ವ್ಯಾಪ್ತಿಗೆ ಪರಿಗಣಿಸಬೇಕು ಎಂದು ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರದ ಮಾದರಿಯಲ್ಲಿ ದಿನಾಂಕ 1/4/2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. Government employee; NPS ಯೋಜನೆ ಹುಟ್ಟು ಹಾಕುವ ಪ್ರಶ್ನೆಗಳು ಮನವಿಯ ವಿವರಗಳು ಕೇಂದ್ರ ಸರ್ಕಾರದ ಅಧಿಸೂಚನೆಯನ್ವಯ ದಿನಾಂಕ 22/12/2003ಕ್ಕಿಂತ ಪೂರ್ವದಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ವಯ ಕೇಂದ್ರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತದೆ. Government employee; NPS ರದ್ದು, 7ನೇ ವೇತನ ಆಯೋಗಕ್ಕೆ ಕೊಟ್ಟ ವಿವರ ಕರ್ನಾಟಕ ರಾಜ್ಯದಲ್ಲಿ ದಿನಾಂಕ 1/4/2006ರಿಂದ ನೂತನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆ ಜಾರಿಗೊಳಿಸುವ ಪೂರ್ವದಲ್ಲಿ ಹೊರಡಿಸಲಾದ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆಗಳು, ನ್ಯಾಯಾಲಯದ ಮೊಕದ್ದಮೆಗಳೂ ಸೇರಿದಂತೆ ಹಲವು ಪ್ರಕರಣಗಳ ಹಿನ್ನೆಲೆಯಲ್ಲಿ ವಿಳಂಬವಾಗಿ ಅಂದರೆ ದಿನಾಂಕ 01/04/2006ರ ನಂತರ ನೇಮಕಾತಿ ಆದೇಶ ಪಡೆದ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರನ್ನು ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿರುವುದು ಸ್ವಾಭಾವಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೇಂದ್ರ ಸರ್ಕಾರದ ಅಧಿಸೂಚನೆಯನ್ವಯ ಕಲ್ಪಿಸಿರುವ ಅವಕಾಶದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸಹ ದಿನಾಂಕ 1/4/2006ರ ಪೂರ್ವದಲ್ಲಿ ಹೊರಡಿಸಿದ ನೇಮಕಾತಿ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡು ತಡವಾಗಿ ಅಂದರೆ 1/4/2006ರ ನಂತರ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆ ವ್ಯಾಪ್ತಿಯಲ್ಲಿ ಪರಿಗಣಿಸಿ ಪಿಂಚಣಿ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆದಿತ್ತು. ಆಗ ವಿಧಾನಸಭೆಯಲ್ಲಿ ತರೀಕೆರೆಯ ಶಾಸಕ ಶ್ರೀನಿವಾಸ ಜಿ. ಹೆಚ್. ಹೊಸ ಪಿಂಚಣಿ ಯೋಜನೆ ಮತ್ತು ಹಳೆ ಪಿಂಚಣಿ ಯೋಜನೆಯ ಕುರಿತು ಪ್ರಶ್ನಿಸಿದ್ದರು. ಇದಕ್ಕೆ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದರು. ದಿನಾಂಕ 1/4/2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಹಾಗೂ ಅನುದಾನಿತ ಮತ್ತು ನಿಗಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಕೈಗೊಂಡಿರುವ ಕ್ರಮವೇನು? ಎಂದು ಪ್ರಶ್ನಿಸಲಾಗಿತ್ತು. ಮುಖ್ಯಮಂತ್ರಿಗಳು ಉತ್ತರದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಯನ್ನು ದಿನಾಂಕ 01/01/2004ರಿಂದ ಜಾರಿಗೊಳಿಸಿರುತ್ತದೆ. ಅದರಂತೆಯೇ ಇತರ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಕೂಡಾ ಸರ್ಕಾರದ ಆದೇಶ 31/03/2006 ರನ್ವಯ ದಿನಾಂಕ 01/04/2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ ಎಂದು ಸಿದ್ದರಾಮಯ್ಯ ಉತ್ತರಿಸಿದ್ದರು.

ಅದರಂತೆ ದಿ.11-1-2024 ರಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಹುದಿನಗಳ ಬೇಡಿಕೆಯಾದ ದಿನಾಂಕ:31-03-2006 ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿ ದಿನಾಂಕ:01-04-2006ರ ನಂತರ ಕೆಲಸಕ್ಕೆ ಹಾಜರಾಗಿ ಪ್ರಸ್ತುತ ಎನ್.ಪಿ.ಎಸ್ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಓ.ಪಿ.ಎಸ್ ನೌಕರರೆಂದು ಪರಿಗಣಿಸುವುದಕ್ಕೆ ಸಂಭಂದಿಸಿದ ಕಡತ ಸಂಖ್ಯೆ:ಎಫ್‌ಡಿ/99/ಪಿಇಎನ್/2023 ರ ಕಡತದಲ್ಲಿ ಅನುಮೋದನೆ ನೀಡಿರುತ್ತಾರೆ. ಹಾಗೂ ಕಡತ ಆರ್ಥಿಕ ಇಲಾಖೆಯಲ್ಲಿದ್ದು, ಶೀಘ್ರದಲ್ಲಿಯೇ ಆದೇಶ ಹೊರಬೀಳಲಿದೆ ಎಂದು ತಿಳಿಸಿದೆ.



logoblog

Thanks for reading Government Employees OPS Updates

Previous
« Prev Post

No comments:

Post a Comment

If You Have any Doubts, let me Comment Here