KAS Age Relaxation
⚫ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ (KAS) ಹುದ್ದೆಗಳ ನೇಮಕಾತಿಗೆ 3 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ಮಾಡಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ.!!
⚫ ಈ ವರ್ಷ ಹೊರಡಿಸುವ ಗೆಜೆಟೆಡ್ ಪ್ರೊಬೆಷನರಿ (KAS) ಹುದ್ದೆಗಳ ನೇಮಕಾತಿಗೆ ಮಾತ್ರ ಒಂದು ಬಾರಿ ಇದು ಅನ್ವಯ.!!
⚫ ಗರಿಷ್ಠ ವಯೋಮಿತಿ ಹೆಚ್ಚಳ:
GM = 35 ರಿಂದ 38ಕ್ಕೆ
2A, 2B, 3A & 3B = 38 ರಿಂದ 41
C-1/SC/ST = 40 ರಿಂದ 43 ಕ್ಕೆ
⚫ ವಯೋಮಿತಿ ಹೆಚ್ಚಳ ಮಾಡಲಿರುವ ಮಾಹಿತಿಯನ್ನು 21-10-2023 ರಂದೇ SR WORLD ನಲ್ಲಿ ಹಂಚಿಕೊಳ್ಳಲಾಗಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.
2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಪಿ.ಎಸ್.ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ (One time measure) ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡುವ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಗೊಳ್ಳಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಗರಿಷ್ಠ 3 ವರ್ಷಗಳವರೆಗೆ ಸಡಿಲಿಸಲು ಪ್ರಸ್ತಾಪಿಸಿದೆ.
ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ) ನಿಯಮಗಳು, 1997 ರನ್ವಯ 2023-24ನೇ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ರಿಕ್ತ ಸ್ಥಾನಗಳಿಗೆ ಹೊಸದಾಗಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ ಎಲ್ಲಾ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿ (One time Measure) ಗರಿಷ್ಠ ವಯೋಮಿತಿಯನ್ನು (One time Measure) 3 ವರ್ಷಗಳಿಗೆ ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
No comments:
Post a Comment
If You Have any Doubts, let me Comment Here