KEA Recruitment Updates 2024
ರಾಜ್ಯದಲ್ಲಿ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 5,158 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಾಗುತ್ತಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, (ಎ) ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, (ಬಿ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ. (ಸಿ)ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (ಡಿ) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ. (ಇ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಎಫ್) ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.
ಹುದ್ದೆಗಳಿಗೆ ವಿದ್ಯಾರ್ಹತೆ, ವೇತನ ಶ್ರೇಣಿ, ಇಲಾಖೆವಾರು ವೃಂದವಾರು ವರ್ಗೀಕರಣ ಹಾಗೂ ಇತರೆ ಪರೀಕ್ಷಾ ಸಂಬಂಧ ಮಾಹಿತಿಗಳನ್ನು ವಿವರವಾದ ಅಧಿಸೂಚನೆಯಲ್ಲಿ ಪ್ರಕಟಿಸಲಾಗುವುದು. ಹುದ್ದೆಗಳ ಸಂಖ್ಯೆ ಹಾಗೂ ವೃಂದ ತಾತ್ಕಾಲಿಕವಾಗಿದ್ದು, ಬದಲಾವಣೆಯ ಷರತ್ತಿಗೆ ಒಳಪಟ್ಟಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
No comments:
Post a Comment
If You Have any Doubts, let me Comment Here