JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, January 10, 2024

National Sports Awards 2023

  Jnyanabhandar       Wednesday, January 10, 2024
National Sports Awards 2023


ರಾಷ್ಟ್ರ ರಾಜಧಾನಿ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು (National Sports Awards 2023) ಪ್ರದಾನ ಮಾಡಿದರು. ಜನವರಿ 9ರ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಸೇರಿದಂತೆ ಭಾರತದ ಪ್ರತಿಭಾವಂತ ಕ್ರೀಡಾಪಟುಗಳು ಪ್ರಶಸ್ತಿ ಸ್ವೀಕರಿಸಿದರು.

ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಸಾಮಾನ್ಯವಾಗಿ ಆಗಸ್ಟ್ 29ರಂದು ನಡೆಯುತ್ತಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕಳೆದ ವರ್ಷ ಸೆಪ್ಟೆಂಬರ್ 23ರಿಂದ ಅಕ್ಟೋಬರ್ 8ರವರೆಗೆ ನಡೆದ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕಾರಣದಿಂದಾಗಿ ಮುಂದೂಡಲಾಯಿತು.

ಬ್ಯಾಡ್ಮಿಂಟನ್‌ ಆಟಗಾರರಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ 2023ರಲ್ಲಿ ನೀಡಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ ಅಭಿಯಾನದಲ್ಲಿ ವೇಗಿ ಮೊಹಮ್ಮದ್‌ ಶಮಿ ಪ್ರಮುಖ ಪಾತ್ರ ವಹಿಸಿದ್ದರು. ಆಡಿದ ಏಳು ಪಂದ್ಯಗಳಲ್ಲಿ 24 ವಿಕೆಟ್ ಪಡೆದು ಟೂರ್ನಿಯ ಗರಿಷ್ಠ ವಿಕೆಟ್‌ ಟೇಕರ್‌ ಆಗಿ ಹೊರಹೊಮ್ಮಿದರು. ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಕುಸ್ತಿಪಟು ಆಂಟಿಮ್ ಪಂಘಲ್, ಬಾಕ್ಸರ್ ಮೊಹಮ್ಮದ್ ಹುಸಾಮುದ್ದೀನ್ ಮತ್ತು ಪ್ಯಾರಾ ಆರ್ಚರ್ ಶೀತಲ್ ದೇವಿ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯ್ತು.

ಖೇಲ್ ರತ್ನ ಪ್ರಶಸ್ತಿಯೊಂದಿಗೆ 25 ಲಕ್ಷ ರೂಪಾಯಿ ನಗದು ಬಹುಮಾನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಜೊತೆಗೆ 15 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ.

2023ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ (ಬ್ಯಾಡ್ಮಿಂಟನ್).

ಅರ್ಜುನ ಪ್ರಶಸ್ತಿ

ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಪಾರುಲ್ ಚೌಧರಿ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ಮೊಹಮ್ಮದ್ ಶಮಿ (ಕ್ರಿಕೆಟ್), ಅನುಷ್ ಅಗರ್ವಾಲಾ (ಕುದುರೆ ಸವಾರಿ equestrian), ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪವನ್ ಕುಮಾರ್ (ಕಬಡ್ಡಿ), ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ-ಖೋ), ಪಿಂಕಿ ( ಲಾನ್ ಬೌಲ್‌ಗಳು), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಇಶಾ ಸಿಂಗ್ (ಶೂಟಿಂಗ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ಐಹಿಕಾ ಮುಖರ್ಜಿ (ಟೇಬಲ್ ಟೆನ್ನಿಸ್), ಸುನಿಲ್ ಕುಮಾರ್ (ಕುಸ್ತಿ), ಆಂಟಿಮ್ ಪಂಘಲ್ (ಕುಸ್ತಿ), ನವೋರೆಮ್ ರೋಶಿಬಿನಾ ದೇವಿ (ವುಶು), ಶೀತಲ್ ದೇವಿ (ಪ್ಯಾರಾ ಆರ್ಚರಿ), ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧರ ಕ್ರಿಕೆಟ್), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್).

ಅತ್ಯುತ್ತಮ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ (ಸಾಮಾನ್ಯ ವಿಭಾಗ)

ಲಲಿತ್ ಕುಮಾರ್ (ಕುಸ್ತಿ), ಆರ್‌ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಖ್ಕರ್ (ಮಲ್ಲಖಾಂಬ್).

| ICC Awards 2023: ಐಸಿಸಿ ಪ್ರಶಸ್ತಿಗೆ ನಾಮಿನೇಟ್ ಆದ ಆಟಗಾರರ ಪೂರ್ಣ ಪಟ್ಟಿ ಇಲ್ಲಿದೆ; ಯಾರೆಲ್ಲಾ ಭಾರತೀಯರಿದ್ದಾರೆ ನೋಡಿ. 

ಅತ್ಯುತ್ತಮ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ ವಿಭಾಗ)

ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಭಾಸ್ಕರನ್ ಇ (ಕಬಡ್ಡಿ), ಜಯಂತ ಕುಮಾರ್ ಪುಶಿಲಾಲ್ (ಟೇಬಲ್ ಟೆನಿಸ್).

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ

ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್), ವಿನೀತ್ ಕುಮಾರ್ ಶರ್ಮಾ (ಹಾಕಿ), ಕವಿತಾ ಸೆಲ್ವರಾಜ್ (ಕಬಡ್ಡಿ).


logoblog

Thanks for reading National Sports Awards 2023

Previous
« Prev Post

No comments:

Post a Comment

If You Have any Doubts, let me Comment Here