Regarding the grant of Special Occasional Leave to Blind Government Employees on the occasion of Louis Bail's birth anniversary.
ಪ್ರತಿ ವರ್ಷ ಜನವರಿ 4 ರಂದು ನಡೆಯುವ ವಿಶ್ವ ಬ್ರೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿ ದೋಷವುಳ್ಳ ವಿಕಲ ಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ನ್ಯಾಷನಲ್ ಫೆಡರೇಶನ್ ಆಫ್ ಡಿಮ ಬ್ಲೈಂಡ್ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿಗಳು ಕೋರಿದ್ದು ಅದರಂತೆ ದಿನಾಂಕ 4-01-2024 ರಂದು ದಿವಂಗತ ಲೂಯಿ ಬ್ರೈಲ್ ರವರ ಜನ್ಮ ದಿನದ ಅಂಗವಾಗಿ ಅಂಧ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ನಿರ್ದೇಶಕರು ವಿಕಲ ಚೇತನರ ಮತ್ತು ಹಿರಿಯ ನಾಗರೀಕರ ಇಲಾಖೆಯವರು ಕೋರಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ 4-01-24 ರಂದು ಲೂಯಿ ಬ್ರೈಲ್ ರವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ವಿಶ್ವ ಬ್ರೈಲ್ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ದೃಷ್ಟಿ ವಿಕಲ ಚೇತನ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸಿ ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರು ಹಾಜರಾತಿ ಪ್ರಮಾಣ ಪತ್ರವನ್ನು ಒದಗಿಸುವ ಹಾಗೂ ಈ ವಿಶೇಷ ರಜೆ ದಿನಕ್ಕೆ ಸರ್ಕಾರದಿಂದ ಯಾವುದೇ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆಯನ್ನು ಕ್ಲೈಮ್ ಪರಿಗಣಿಸಲಾಗುವುದಿಲ್ಲ ಷರತ್ತಿಗೊಳಪಟ್ಟು 04-01-2024ರಂದು ರಜೆ ಮಂಜೂರು ಮಾಡಿ ಆದೇಶಿಸಿದೆ.
No comments:
Post a Comment
If You Have any Doubts, let me Comment Here