JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, January 4, 2024

Regarding police verification of drivers operating in school vehicles

  Jnyanabhandar       Thursday, January 4, 2024
Regarding police verification of drivers operating in school vehicles.

ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ ಮಾಡಿದ್ದು, ಈ ಬಗ್ಗೆ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಸುತ್ತೊಲೆಯಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ.

ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್‌ ಮಾಡಿಸುವ ಬಗ್ಗೆ ಕ್ರಮವಹಿಸಲು ತಿಳಿಸಲಾಗಿರುತ್ತದೆ.

ಕರ್ನಾಟಕ ಮೊಟಾರು ವಾಹನಗಳ ನಿಯಮಗಳು 1989ಕ್ಕೆ ತಿದ್ದುಪಡಿ ತಂದು Conditions for vehicles engaged in transport of school children Rules 2012, ಖಾಸಗಿ ಒಪ್ಪಂದ ವಾಹನಗಳಲ್ಲಿ ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಲುವಾಗಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ (4) ರಲ್ಲಿ ಈ ಕೆಳಕಂಡಂತೆ ವ್ಯಾಖ್ಯಾನಿಸಲಾಗಿದೆ.

4. School cabs Safety Committee:- In every school wherein school cab used as a means of transportation shall have a safety committee to look into the matters pertaining to safe transportation of School children, and transportation fee and identification of stops. The safety Committee should comprise parents and transporters representatives along with the school staff. The committee shall verify the validity of documents of the vehicle viz., Registration certificate, Certificate of fitness, Certificate of Insurance Permit, Emission Certificate, Driving License, Fire extinguisher, First aid kit, and ensure that all the safety measures have been adopted in the vehicle.

ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ನಿಯಮದಂತೆ 'ಸ್ಕೂಲ್ ಕ್ಯಾಬ್ ಸೇಫ್ಟಿ ಕಮಿಟಿ" ರಚಿಸಲು ಉಲ್ಲೇಖ-2ರನ್ವಯ ಈ ಕಛೇರಿಯಿಂದ ಸುತ್ತೋಲೆಯನ್ನು ಹೊರಡಿಸಿರುವುದನ್ನು ಉಲ್ಲೇಖಿಸಿ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಮತ್ತು ವಾಹನಗಳ ಸಹಾಯಕರ ಪೊಲೀಸ್ ವೆರಿಫಿಕೇಷನ್‌ ಮಾಡಿಸುವ ಬಗ್ಗೆ ಎಲ್ಲಾ ಶಾಲಾ ಆಡಳಿತ ಮಂಡಳಿಗಳು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.

1. ಶಾಲಾ ವಾಹನಗಳಲ್ಲಿ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಸಂದರ್ಭದಲ್ಲಿ ಖಾಸಗಿ ಶಾಲಾ ವಾಹನಗಳಲ್ಲಿ ಚಾಲಕರಿಂದ ಮತ್ತು ವಾಹನಗಳ ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿರುವಂತೆ ಪ್ರಕರಣಗಳು ವರದಿಯಾಗುತ್ತಿರುವುದು ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಬಸ್, ವ್ಯಾನ್, ಆಟೋ ರಿಕ್ಷಾ ಮತ್ತು ಇತರೆ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಎಲ್ಲಾ ಚಾಲಕರ ಮತ್ತು ಸಹಾಯಕರ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ಅವರ ನಡತೆಯ ಬಗ್ಗೆ ನಡವಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು.

2. ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಆಟೋ ರಿಕ್ಷಾಗಳಲ್ಲಿ ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನು ನಿರ್ವಹಿಸುವ ಚಾಲಕರು ಮತ್ತು ಸಹಾಯಕರ ನಡವಳಿಕೆ ಬಗ್ಗೆ ಸಂಬಂಧಿಸಿದ ಪೊಲೀಸ್‌ ಠಾಣೆಗಳಿಂದ ನಡತೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು ಹಾಗೂ ಪ್ರತಿ ಎರಡು ವರ್ಷಗಳಿಗೊಮ್ಮೆ ನವೀಕರಿಸುವುದು.

3. ಸದರಿ ಚಾಲಕರ ಮತ್ತು ಸಹಾಯಕರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಿಂದ ಪಡೆದ ನಡವಳಿಕೆ ಪ್ರಮಾಣ ಪತ್ರವನ್ನು ಆಯಾ ಶಾಲೆಯ SATS ನಲ್ಲಿ ತಂತ್ರಾಂಶದಲ್ಲಿ Upload ಮಾಡುವುದು.

4. ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನ್ನು ನಿರ್ವಹಿಸಲು ಸಹಾಯಕರಾಗಿ ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳಬೇಕು.

5. ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರ ಅಳವಡಿಸುವುದು. 6. ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ
ನಿರ್ಬಂಧಿಸುವುದು.

7. ಶಾಲಾ ವಾಹನಗಳಲ್ಲಿ ಕೆಲಸ ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಪ್ರತಿದಿನ ಕೆಲಸ ಪ್ರಾರಂಭದ ಮೊದಲು ಮತ್ತು ಎಲ್ಲಾ ಮಕ್ಕಳನ್ನು ಮನೆಗೆ ಬಿಟ್ಟನಂತರ ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು 8. ಸದರಿ ಮಾಹಿತಿಗಳನ್ನು ಪ್ರತಿ ವರ್ಷ ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿ ಅನುಮೋದನೆಯನ್ನು ಪಡೆಯುವುದು.

ಈ ಮೇಲ್ಕಂಡ ಅಂಶಗಳನ್ನು ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳು ಕಟ್ಟುನಿಟ್ಟಾಗಿ ಅನುಸರಿಸುತ್ತಿರುವುದನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳುವುದು. ಶಾಲಾ ಮಕ್ಕಳ ಮೇಲೆ ದೌರ್ಜನ್ಯಗಳಾಗದಂತೆ ತಡೆಗಟ್ಟಲು ಮೇಲ್ಕಂಡ ಅಂಶಗಳನ್ನು ಅನುಸರಿಸಲು ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಸೂಚನೆ ನೀಡಲು ತಿಳಿಸಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲು ಸೂಕ್ತ ಕ್ರಮ ವಹಿಸುವುವಂತೆ ಸೂಚಿಸಿದೆ.

logoblog

Thanks for reading Regarding police verification of drivers operating in school vehicles

Previous
« Prev Post

No comments:

Post a Comment

If You Have any Doubts, let me Comment Here