Status of various Notification PROPOSALS of KPSC
ಪೌರಾಡಳಿತ ಇಲಾಖೆ, ಬಿಬಿಎಂಪಿ, ಪಶು ಸಂಗೋಪನೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕಾಗಿರುವ 1900ಕ್ಕೂ ಹೆಚ್ಚು ಹುದ್ದೆಗಳ ಸ್ಟೇಟಸ್ ರಿಪೋರ್ಟ್ ಅನ್ನು ಕರ್ನಾಟಕ ಲೋಕ ಸೇವಾ ಆಯೋಗ ಇದೀಗ ಬಿಡುಗಡೆ ಮಾಡಿದೆ.
ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಲ್ಲಿ 14 ಪಶು ವೈದ್ಯಾಧಿಕಾರಿಗಳ ಬ್ಯಾಕ್ ಲಾಗ್ ಹುದ್ದೆಗಳು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು, ರಿಕವರಿ ಆಫೀಸರ್ ಹುದ್ದೆಗಳು, ಬಿಬಿಎಂಪಿಯ ಕಿರಿಯ ಇಂಜಿನಿಯರ್, ಸ್ಟಾಫ್ ನರ್ಸ್ ಗಳು, ಪೌರಾಡಳಿತ ಇಲಾಖೆಯಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಕರ ವಸೂಲಿಗಾರರ ಹುದ್ದೆಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಸೇರಿ ಅನೇಕ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ ನಲ್ಲಿ ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪರಿಶೀಲನೆ ನಡೆಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here