1137 Civil PC Exam Dress Code
2022-23ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ ಲಾಗ್-1137 ಹುದ್ದೆಗಳಿಗೆ ದಿನಾಂಕ:25.02.2024ರಂದು ಬೆಳಿಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ.
ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಹಾಗೂ ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ.
ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೊಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್‌ಗಳನ್ನು ಧರಿಸತಕ್ಕದ್ದಲ್ಲ.
.ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸತಕ್ಕದ್ದಲ್ಲ.
ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ
ಅಡಿಬಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.
• ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡತಗಳನ್ನು ಧರಿಸುವುದು ನಿಷೇದಿಸಲಾಗಿದೆ.
ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
• ಮಹಿಳಾ ಮತ್ತು ತೃತಿಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
• ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
• ಎತ್ತರ ಹಿಮ್ಮಡಿಯ ಶೂಗಳನ್ನು / ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ / ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
• ಮಹಿಳಾ ಮತ್ತು ತೃತಿಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ),
No comments:
Post a Comment
If You Have any Doubts, let me Comment Here