UPSC/KAS/SSC/RRB/Banking/Group-C Free coaching for SC/ST/OBC candidates 2023 Dress code
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 18-02-2024 ರಂದು ನಡೆಯುವ UPSC/KAS/SSC/RRB/ಬ್ಯಾಂಕಿಂಗ್/ಗ್ರೂಪ್-ಸಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯ ವಸ್ತ್ರಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ.
ಪುರುಷ ಅಭ್ಯರ್ಥಿಗಳ ವಸ್ತ್ರಸಂಹಿತೆ
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.
ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ
ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
No comments:
Post a Comment
If You Have any Doubts, let me Comment Here