KEA KUWSDB Recruitment 2024 Detailed Notification-2024
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಬೆಂಗಳೂರು (KUWSDB) ಇಲ್ಲಿನ 50 AE (Civil) & 14 FDA ಸೇರಿದಂತೆ ಒಟ್ಟು 64 ಹುದ್ದೆಗಳ ನೇಮಕಾತಿಗೆ KEA ಯಿಂದ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 'ಸಿ' ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
⚫ ವಿದ್ಯಾರ್ಹತೆ: BE/B.Tech / BCom
⚫ ಅರ್ಜಿ ಸಲ್ಲಿಸುವ ಅವಧಿ: 10-02-2024 ರಿಂದ 10-03-2024 ರ ವರೆಗೆ
ಅರ್ಜಿ ಸಲ್ಲಿಕೆ ವಿಧಾನ
ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣ http://kea.kar.nic.in ನಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 10-02-2024ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು 10-03-2024 ಕೊನೆಯ ದಿನವಾಗಿದೆ. ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ 14-03-2024 ಆಗಿರುತ್ತದೆ.
ವಯೋಮಿತಿ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳಾದಂತ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.750.ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1, ಮಾಜಿ ಸೈನಿಕರು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಶುಲ್ಕ ವಿಧಿಸಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಪ್ ಲೈನ್ ಒಎಂ ಆರ್ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
⚫ Syllabus, ವಯೋಮಿತಿ, ನೇಮಕಾತಿ ವಿಧಾನದ ಸಂಪೂರ್ಣ ಮಾಹಿತಿಗಾಗಿ ಈ Pdf ನೋಡಿ.
Notification
Click Here To Download Posts Classification Classification
No comments:
Post a Comment
If You Have any Doubts, let me Comment Here