State Govt Employees Grand Conference sanctioned 2 days special casual leave to Govt employees
ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸದರಿ ಸಮ್ಮೇಳನ ಹಾಗೂ ಆಡಳಿತದಲ್ಲಿ ಕಾರ್ಯಕ್ರಮತೆ ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ/ನೌಕರರಿಗೆ ದಿನಾಂಕ: 27.02.2024 ರಂದು ಒಂದು ದಿನ ಹಾಗೂ ಇತರೆ ಜಿಲ್ಲೆಗಳ ಅಧಿಕಾರಿ/ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ: 27.02.2024 ಮತ್ತು 28.02.2024 ಗಳಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ.
ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.
No comments:
Post a Comment
If You Have any Doubts, let me Comment Here