402 PSI Exam Postponed
ಮೇ 8 ರಂದು ನಿಗದಿಯಾಗಿದ್ದ 402 PSI ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್ ಮಾಡಿದೆ.
402 PSI ಹುದ್ದೆಗಳ ನೇಮಕಾತಿಗೆ ಮೇ 8 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಮುಂದಿನ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್ ಮಾಡಿದೆ.
ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇಐ 2024 ದಿನಾಂಕ 22-02-2024 ರನ್ವಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ. ಅದರಂತೆ ದಿನಾಂಕ 08.05.2024 ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.
ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ದಿನಾಂಕ 08.05.2024 ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
No comments:
Post a Comment
If You Have any Doubts, let me Comment Here