5th, 8th and 9th Class Assessment Exam postponed
5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.
ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಕಾವೇರಿ ಅವರು ಪರೀಕ್ಷೆ ಮಂದೂಡಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 11 ರಿಂದ 5, 8, 9ನೇ ತರಗತಿ ಮಕ್ಕಳಿಗೆ ರಾಜ್ಯಾದ್ಯಂತ ಮೌಲ್ಯಾಂಕನ ಪರೀಕ್ಷೆ ಆರಂಭವಾಗಿತ್ತು. ದಿಢೀರ್ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈಗಾಗಲೇ ಮಕ್ಕಳು ಪ್ರಥಮ ಭಾಷೆ ಮತ್ತು ದ್ವಿತೀಯ ಭಾಷೆ ಪರೀಕ್ಷೆಗಳನ್ನು ಬರೆದಿದ್ದಾರೆ. ಈ ಹಂತದಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ.
ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿದೆ.
No comments:
Post a Comment
If You Have any Doubts, let me Comment Here