Election Commission Important News About Lak sabha Election
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. ಅದಕ್ಕೂ ಮುನ್ನವೇ ಚುನಾವಣಾ ಆಯೋಗದಿಂದ ಮಹತ್ವದ ಸೂಚನೆಯೊಂದನ್ನು ಹೊರಡಿಸಿದೆ.
ಈ ಕುರಿತಂತೆ ಕರ್ನಾಟಕ ಉಪ ಮುಖ್ಯ ಚುನಾವಣಾಧಇಕಾರಿ ರಾಜ್ಯ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಅದರಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ ಎಂದಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇಮೇಲ್ ವಿಳಾಸ additionalceo1.karnataka@gmail.com ಮತ್ತು jointceomcc@gmail.com ಕ್ಕೆ ಸಲ್ಲಿಸುವಂತೆ ಹಾಗೂ ಅದರ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
No comments:
Post a Comment
If You Have any Doubts, let me Comment Here