JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Tuesday, March 19, 2024

Free travel in KSRTC bus for students writing SSLC exam

  Jnyanabhandar       Tuesday, March 19, 2024

Free travel in KSRTC bus for students writing SSLC exam

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಅನುಮತಿ ನೀಡಿದೆ.

ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ.

ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ "ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು" ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಿದ್ದಾರೆ.



logoblog

Thanks for reading Free travel in KSRTC bus for students writing SSLC exam

Previous
« Prev Post

No comments:

Post a Comment

If You Have any Doubts, let me Comment Here