IAS Officers Transfer Order dated 14-03-2024
ಬಿಸಿಲಿನ ಕಾವು ಜೋರಾಗುತ್ತಿದ್ದಂತೆ ರಾಜ್ಯದಲ್ಲೂ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಸೂಕ್ತ ಅಭ್ಯರ್ಥಿಯ ಹುಡುಕಾಟವನ್ನ ರಾಜಕೀಯ ಪಕ್ಷಗಳು ನಡೆಸಿದಿದ್ದು, ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ.
ಇನ್ನು ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ1.ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ2.ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್3.ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ4.ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ5. ಭರತ್ ಎಸ್: ಸಿಇಒ, ಜಿ.ಪಂ.ಗದಗ ವರ್ಗಾವಣೆ ಮಾಡಲಾಗಿದೆ.ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಅಲ್ಲದೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತಿರುವ ಸಂದರ್ಭದಲ್ಲಿ ಐವರು ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸಿದ್ದರಾಮಯ್ಯ ಅವರ ಸರ್ಕಾರ ಆದೇಶ ಹೊರಡಿಸಿದೆ.
No comments:
Post a Comment
If You Have any Doubts, let me Comment Here