Karnataka Civil Services (Computer Literacy Test) (Amendment) Rules, 2024
ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಅವಧಿ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಪರೀಕ್ಷೆ ಪಾಸ್ ಮಾಡುವುದಕ್ಕೆ ನಿಗದಿಪಡಿಸಿದ್ದಂತ ಡೆಡ್ ಲೈನ್ ನ್ನು ರಾಜ್ಯ ಸರ್ಕಾರ ಡಿಸೆಂಬರ್ 31, 2024ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 07.02.2024ರ ಕರ್ನಾಟಕ ರಾಜ್ಯಪತ್ರದ ಭಾಗ IV-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ ಸದರಿ ರಾಜ್ಯಪತ್ರವನ್ನು ದಿನಾಂಕ: 07.02.2024ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ ಮತ್ತು, ಸದರಿ ಕರಡು ನಿಯಮಗಳ ಬಗ್ಗೆ, ಸ್ವೀಕೃತವಾಗಿರುವ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಶೀಲಿಸಿದೆ.
ಮುಂದುವರೆದು, ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ "ದಿನಾಂಕ: 31.12.2023 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ “ದಿನಾಂಕ: 31.12.2024 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2024 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ಸುತ್ತೋಲೆ ಹೊರಡಿಸಲಾಗಿದೆ.
No comments:
Post a Comment
If You Have any Doubts, let me Comment Here