Karnataka Government Employees DA HIKE Order
ಲೋಕಸಭಾ ಚುನಾವಣಾ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ (Government Employees) ಗುಡ್ ನ್ಯೂಸ್ (Good News) ನೀಡಲಾಗಿದೆ. ರಾಜ್ಯ ಸರ್ಕಾರ (Karnataka Government) ತುಟ್ಟಿಭತ್ಯೆ ಹೆಚ್ಚಳ (DA Hike) ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಶೇಕಡಾ 3.75ರಷ್ಟು ತುಟ್ಟಿಭತ್ಯೆ (Deaness Allowance) ಹೆಚ್ಚಿಸಲು ಆದೇಶಿಸಲಾಗಿದೆ. ತುಟ್ಟಿಭತ್ಯೆ ಪ್ರಮಾಣವನ್ನು ಶೇ. 38.75ರಿಂದ ಶೇ. 42.50ಕ್ಕೆ ಹೆಚ್ಚಿಸಲಾಗಿದೆ.
ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR ಮತ್ತು ಜಿಲ್ಲಾ ಪಂಚಾಯತ್ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75ರಿಂದ ಶೇಕಡ 42.5ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಸರ್ಕಾರದ ಆರ್ಥಿಕ ಇಲಾಖೆಗಳ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಸಹಿ ಮಾಡಿರುವ ಆದೇಶದಲ್ಲಿ ತಿಳಿಸಲಾಗಿದೆ.
ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, 2023ರ ಜುಲೈ 1ರಿಂದ ಜಾರಿಗೆ ಬರುವಂತೆ ಶೇ. 3.75 ರಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ತುಟ್ಟಿ ಭತ್ಯೆ ಶೇ 38.75ಗೆ ಏರಿಸಲಾಗಿತ್ತು.
ಇತರ ಪ್ರಮುಖ ಅಂಶಗಳು
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಅದೇಶಗಳು ಅನ್ವಯಿಸುತ್ತವೆ.
ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂಥ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.
No comments:
Post a Comment
If You Have any Doubts, let me Comment Here