Notification for Departmental Examination 2024 First Session is published
2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2024ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಿದ್ದು, 2024ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ದಿನಾಂಕ 15-03-2024ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ದಿನಾಂಕ 14-04-2024 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದಿದೆ.
ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ www.kpsc.kar.nic.in ಗೆ ಭೇಟಿ ನೀಡಿ ಸಲ್ಲಿಸಬೇಕು.
ಅರ್ಹತೆ - ಈ ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸು ಸರ್ಕಾರಿ ನೌಕರರು ಆಗಿರಬೇಕು. ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಪ್ರಾಧಿಕಾರಗಳ ಖಾಯಂ ನೌಕರರು ಆಗಿರಬೇಕು. ಗ್ರೂಪ್-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದೆ.
No comments:
Post a Comment
If You Have any Doubts, let me Comment Here