JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, March 23, 2024

Moulyankan Exam Revised Time Table 2024

  Jnyanabhandar       Saturday, March 23, 2024
5th 8th and 9th Class Assessment Exam Revised Time Table

ಇಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಕಾಯ್ದಿರಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯ ತೀರ್ಪು ಪ್ರಕಟಿಸಲಾಗಿತ್ತು. ಈ ತೀರ್ಪಿನಲ್ಲಿ ಬಾಕಿ ಪರೀಕ್ಷೆ ನಡೆಸೋದಕ್ಕೆ ಶಿಕ್ಷಣ ಇಲಾಖೆಗೆ ಅನುಮತಿ ನೀಡಿತ್ತು. ಹೀಗಾಗಿ ಮಾರ್ಚ್.25ರಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪುನರಾರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿತ್ತು.

ಈ ಬೆನ್ನಲ್ಲೇ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿ, ಈ ಹಿಂದೆ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಮೌಲ್ಯಾಂಕನವನ್ನು ಮುಂದುವರೆಸುವಂತೆ ನೀಡಿದ್ದ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ರಾಜ್ಯ ಉಚ್ಛ ನ್ಯಾಯಾಲಯ ವಿಭಾಗೀಯ ಪೀಠಕ್ಕೆ ರವಾನಿಸಿತ್ತು. ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿತ್ತು ಎಂದಿದ್ದಾರೆ.

ಮುಂದುವರೆದು, ರಾಜ್ಯ ಘನ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸದರಿ ದಾವೆಯ ಪ್ರಕರಣವನ್ನು ವಿಚಾರಣೆ ನಡೆಸಿ ದಿನಾಂಕ: 22-3-2024ರಂದು ಅಂತಿಮ ತೀರ್ಪು ನೀಡಿದ್ದು, 5, 8 ಮತ್ತು 9ನೇ ತರಗತಿಗಳ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ಕಾರ್ಯವನ್ನು ಉಳಿದ ವಿಷಯಗಳಿಗೆ ಮುಂದುವರೆಸಲು ಸೂಚಿಸಿ ಆದೇಶಿಸಿರುತ್ತದೆ. ಅದರಂತೆ ಸದರಿ ಮೌಲ್ಯಾಂಕನ ಕಾರ್ಯವನ್ನು ವಿದ್ಯಾರ್ಥಿಗಳ ಅಭ್ಯಾಸದ ಹಿತದೃಷ್ಟಯಿಂದ ದಿನಾಂಕ: 25-3-2024ರಿಂದ ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಳಿಕ ಇದೀಗ ಶಾಲಾ ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

logoblog

Thanks for reading Moulyankan Exam Revised Time Table 2024

Previous
« Prev Post

No comments:

Post a Comment

If You Have any Doubts, let me Comment Here