Online application for admission to 6th Standard in Maulana Azad Model School (MAMS) for the Academic year 2024-25
2024-25 ರ ಶೈಕ್ಷಣಿಕ ವರ್ಷಕ್ಕೆ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ (MAMS) 6 ನೇ ತರಗತಿಗೆ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ
2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸರ್ಕಾರಿ ಮುಸ್ಲಿಂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‌ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಒಬಿಸಿ) ಶೇ.25 ಸೀಟು ಲಭ್ಯವಿದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು https://sevasindhu.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ಕ್ಷೌರದ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಿಕೆ, ಪ್ರತಿ ವಿದ್ಯಾರ್ಥಿಗೆ ಟೂತ್ಪೇಸ್ಟ್, ಸೋಪ್, ಬ್ರಷ್, ಎಣ್ಣೆ ಒಳಗೊಂಡ ಸೋಪ್ ಕಿಟ್ ವಿತರಣೆ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳನ್ನು ಒದಗಿಸಲಾಗುತ್ತಿದೆ.
No comments:
Post a Comment
If You Have any Doubts, let me Comment Here