JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, March 14, 2024

Postponement of elections of all co-operative society banks by the state government

  Jnyanabhandar       Thursday, March 14, 2024

Postponement of elections of all co-operative society banks by the state government

ರಾಜ್ಯ ಸರ್ಕಾರದಿಂದ ಎಲ್ಲಾ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಮುಂದೂಡಿಕೆ ಮಾಡಿ ಹಾಗೂ ಸಹಕಾರ ಸಂಘಗಳ ಆಡಳಿತ ಮಂಡಳಿಯ ಹಾಗೂ ಪದಾಧಿಕಾರಿಗಳ ಅವಧಿಯನ್ನು ಮುಂದುವರೆಸಿ ಆದೇಶಿಸಿದೆ.

ಈ ಕುರಿತಂತೆ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ.

ಅದರಲ್ಲಿ 2024ರ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಚುನಾವಣೆ ನೀತಿ ಸಂಹಿತೆಯು ಜಾರಿಗೆ ಬರುವ ಸಾಧ್ಯತೆ ಇರುತ್ತದೆಯೆಂದು, ರಾಜ್ಯದಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರಡಿಯಲ್ಲಿ ಸುಮಾರು ನಲವತ್ತೈದು ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳು ನೋಂದಣಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು, ಮಾರ್ಚ್ 20240 ಮಾಹಯಿಂದ ಜೂನ್-2024ರ ಮಾಹೆಯ ಅವಧಿಯಲ್ಲಿ ಹಲವು ಸಹಕಾರ ಸಂಘಗಳ ಆಡಳಿತ ಮಂಡಳಿಯ ಪದಾವಧಿಯು ಮುಕ್ತಾಯಗೊಳ್ಳಲಿದ್ದು, ಅಂತಹ ಸಹಕಾರ ಸಂಘಗಳ ಚುನಾವಣೆಗೆ ಈಗಾಗಲೇ ಮಾರ್ಚ್-2024ರ ಮಾಹೆಯಿಂದ ಮೇ-2024ರ ಮಾಹೆಯ ಅವಧಿಯಲ್ಲಿ ಚುನಾವಣಾ ದಿನಾಂಕಗಳನ್ನು ನಿಗದಿಪಡಿಸಿ ಚುನಾವಣಾ ಪಕ್ರಿಯೆ ಪ್ರಾರಂಭಿಸಲಾಗಿರುತ್ತದೆ ಎಂದು, ಅಲ್ಲದೇ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಸಹಕಾರ ಇಲಾಖೆಯನ್ನೊಳಗೊಂಡಂತೆ ಇತರೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳನ್ನು ಚುನಾವಣೆಯ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ ಎಂದು, ಇಂತಹ ಸನ್ನಿವೇಶದಲ್ಲಿ ಸಹಕಾರ ಸಂಘಗಳ ಚುನಾವಣೆಯನ್ನು ಸಮರ್ಪಕವಾಗಿ ಜರುಗಿಸಲು ಅವಶ್ಯಕ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿರುತ್ತಾರೆ.

ಮುಂದುವರೆದು, ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪೋಲೀಸ್ ಇಲಾಖೆಯು ಸಹ ಕರ್ತವ್ಯ ನಿರ್ವಹಿಸಬೇಕಾಗಿರುವುದರಿಂದ ಸದರಿ ಸಂಘಗಳ ಆಡಳಿತ ಮಂಡಳಿಗಳ ಚುನಾವಣೆಯ ಪುಕ್ರಿಯೆಯನ್ನು ಶಾಂತಯುತವಾಗಿ ನಡೆಸಲು ಕಷ್ಟಸಾಧ್ಯವಾಗುತ್ತದೆಯೆಂದು, ಒಂದು ವೇಳೆ ಮಾರ್ಚ್-2024 ರಿಂದ ಮೇ-2024ರ ಮಾಹೆಯ ಅಂತ್ಯದವರೆಗಿನ ಅವಧಿಯಲ್ಲಿ ಆಡಳಿತ ಮಂಡಳಿಯ ಅವಧಿ ಮುಕ್ತಾಯವಾಗುವ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ಜರುಗಿ ನಿಗದಿತ ಅವಧಿಯಲ್ಲಿ ಆಡಳಿತ ಮಂಡಳಿ ರಚನೆಯಾಗಿರದಿದ್ದರೆ ಅಂತಹ ಎಲ್ಲಾ ಸಹಕಾರ ಸಂಘಗಳಿಗೂ ಕೂಡ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಪುಕರಣ 28ಎ(5) ರಡಿ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಬೇಕಾಗುತ್ತದೆಂದು ಸಹಕಾರ ಸಂಘಗಳಿಗೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಪುಕರಣ 28ಎ(5),28ಬಿ, 29ಎಫ್(4)ಗಳಿಗೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಪ್ರಕರಣ 121ರಡಿ ಸರ್ಕಾರಕ್ಕೆ ಪುದತ್ತವಾದ ಅಧಿಕಾರದಡಿಯಲ್ಲಿ ವಿನಾಯಿತಿಯನ್ನು ನೀಡಿ ಆಡಳಿತ ಮಂಡಳಿಯ ಚುನಾವಣೆಗಳನ್ನು ಮುಂದೂಡಿ ಹಾಲಿ ಇರುವ ಆಡಳಿತ ಮಂಡಳಿಯನ್ನು ಹಾಗೂ ಪದಾಧಿಕಾರಿಗಳನ್ನು ಮುಂದುವರೆಸುವ ಸಂಬಂಧ ಸೂಕ್ತ ಆದೇಶ ಹೊರಡಿಲು ನಿಬಂಧಕರು ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಿರುತ್ತಾರೆ.

ಪರಿಶೀಲಿಸಲಾಗಿ, ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಸಹಕಾರ ಇಲಾಖೆಯನ್ನೊಳಗೊಂಡಂತೆ ಇತರೆ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳನ್ನು ಚುನಾವಣೆಯ ಕರ್ತವ್ಯಕ್ಕೆ ನಿಯೋಜಿಸುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಚುನಾವಣೆಯನ್ನು ಸಮರ್ಪಕವಾಗಿ ಜರುಗಿಸಲು ಅವಶ್ಯಕ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲು ಕಷ್ಟ ಸಾಧ್ಯವಾಗುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ಅವಧಿ ಮುಗಿಯುವ ಸಹಕಾರ ಸಂಘಗಳಿಗೆ ಚುನಾವಣೆ ನಡೆಸಲು ಹಾಗೂ ಚುನಾವಣೆ ದಿನಾಂಕಗಳನ್ನು ನಿಗದಿಪಡಿಸಿ ಸಾಮಾನ್ಯ ಚುನಾವಣೆ ಪ್ರಕ್ರಿಯೆ ಹಾಗೂ ಆಕಸ್ಮಿಕ ತೆರವಾದ ಸ್ನಾನಗಳ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿರುವ ಎಲ್ಲಾ ಸಹಕಾರ ಸಂಘಗಳಿಗೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಪ್ರಕರಣ 28ಎ(5), 28ಬಿ, 29ಎಫ್(4), 39(ಎ)ಗಳಿಗೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಪ್ರಕರಣ 121ರಡಿ ಸರ್ಕಾರಕ್ಕೆ ಪದತ್ತವಾದ ಅಧಿಕಾರದನ್ವಯ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿನಾಯಿತಿ ನೀಡಿ ಆಡಳಿತ ಮಂಡಳಿಯ ಅವಧಿ ಮುಗಿಯುವ ಸಂಘ/ಬ್ಯಾಂಕ್‌ಗಳ ಆಡಳಿತ ಮಂಡಳಿ ಚುನಾವಣೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಿ ಹಾಲಿ ಇರುವ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಮುಂದುವರೆಸುವುದು ಸೂಕ್ತವೆಂದು ಭಾವಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ಕಲಂ 121ರಡಿ ಸರ್ಕಾರಕ್ಕೆ ದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ, ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡಂತೆ ಆದೇಶಿಸಿದ್ದಾರೆ.
1. ರಾಜ್ಯದಲ್ಲಿರುವ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವ/ಮುಕ್ತಾಯಗೊಳ್ಳಲಿರುವ ಸಹಕಾರ ಸಂಘಗಳು/ಸಹಕಾರ ಬ್ಯಾಂಕುಗಳ (ಪ್ರಾಥಮಿಕ, ಮಾಧ್ಯಮಿಕ /ಒಕ್ಕೂಟಗಳ (ಫೆಡರಲ್ ಸಂಸ್ಥೆ) ಮತ್ತು ಅಪೆಕ್ಸ್ ಸಹಕಾರ ಸಂಘಗಳ) ಚುನಾವಣೆಗಳನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪುಕರಣ 28ಎ(5), 28ಬಿ, 29ಎಫ್(4) 39(ಎ)ಗೆ ವಿನಾಯಿತಿ ನೀಡಿ ಮುಂದಿನ ಆದೇಶದವರೆಗೆ ಚುನಾವಣೆಗಳನ್ನು ಮುಂದೂಡಿ ಹಾಲಿ ಇರುವ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಅವಧಿಯನ್ನು ಮುಂದುವರಿಸಿದೆ.

2. ಈಗಾಗಲೇ ಚುನಾವಣೆ ವೇಳಾಪಟ್ಟಿ (Calender of events) ಹೊರಡಿಸಿ, ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದಲ್ಲಿ ಅದನ್ನು ಸಹ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿದ್ದಾರೆ.

ಈಗಾಗಲೇ ಘನ ನ್ಯಾಯಾಲಯಗಳ ಆದೇಶದಂತೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿದ್ದಲ್ಲಿ/ ಪ್ರಾರಂಭವಾಗಬೇಕಿದ್ದಲ್ಲಿ ಈ ಆದೇಶ ಕುರಿತು ಮಾನ್ಯ ಘನ ನ್ಯಾಯಾಲಯದ ಗಮನಕ್ಕೆ ತಂದು ಘನ ನ್ಯಾಯಾಲಯದ ಆದೇಶದಂತೆ ಕ್ರಮವಹಿಸುವಂತೆ ಸೂಚಿಸಿದ್ದಾರೆ.

logoblog

Thanks for reading Postponement of elections of all co-operative society banks by the state government

Previous
« Prev Post

No comments:

Post a Comment

If You Have any Doubts, let me Comment Here