JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Monday, March 4, 2024

Regarding grant of special casual leave to Government employees

  Jnyanabhandar       Monday, March 4, 2024

Regarding grant of special casual leave to Government employees

ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಚ್ 5, 6ರಂದು ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತು ಸೋಮವಾರ ಅಧಿಕೃತ ಸುತ್ತೋಲೆ ಪ್ರಕಟಿಸಲಾಗಿದೆ.ಈ ಕುರಿತು ಜಿ. ಸುಧಾ, ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ) ಈ ಕುರಿತು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಸಹ ರಜೆ ನೀಡಲಾಗಿತ್ತು.
ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ ಎಸ್‌.ಟಿ. ನೌಕರರ ಸಮನ್ವಯ ಸಮಿತಿಯ ವತಿಯಿಂದ ದಿನಾಂಕ 05/03/2024ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಡಾ. ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ 5ನೇ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌.ಸಿ./ ಎಸ್.ಟಿ. ನೌಕರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಹೇಳಿದೆ.Government Employee; ಹಾಜರಾತಿ ಪ್ರಮಾಣ ಪತ್ರದ ಮಾಹಿತಿ ಸದರಿ ಸಮಾವೇಶದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ಸಂಘದ ಸದಸ್ಯರು ಅಧಿಕಾರಿ/ ನೌಕರರಿಗೆ ದಿನಾಂಕ 05/03/2024ರಂದು ಒಂದು ದಿನ ಮಾತ್ರ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಸಂಘದ ಸದಸ್ಯ ಅಧಿಕಾರಿ/ ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ 05/03/2024 ಮತ್ತು 06/03/2024 ರಂದು ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದೆ.Government employee: ವಿಆರ್‌ಎಸ್‌ನತ್ತ ನೌಕರರ ಚಿತ್ತ ಏಕೆ? ಮುಂದುವರೆದು, ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಸಮ್ಮೇಳನದ ಸಂಘಟಕರಿಂದ ಹಾಜರಾತಿ ಪ್ರಮಾಣ ಪತ್ರವನ್ನು ಪಡೆಯುವ ಷರತ್ತಿಗೊಳಪಟ್ಟು ರಜೆಯನ್ನು ಮಂಜೂರು ಮಾಡಲು ಸಕ್ಷಮ ಪ್ರಾಧಿಕಾರ ಈ ರಜೆಯನ್ನು ಮಂಜೂರು ಮಾಡತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.ಫೆಬ್ರವರಿ 27ರಂದು ರಜೆ ನೀಡಲಾಗಿತ್ತು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಫೆಬ್ರವರಿ 27ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿತ್ತು. ಸರ್ಕಾರಿ ನೌಕರರು ಇದರಲ್ಲಿ ಪಾಲ್ಗೊಳ್ಳಲು ರಜೆ ನೀಡಲಾಗಿತ್ತು.ವಿಮಲಾಕ್ಷಿ. ಬಿ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಸು-ತಪಾಸಣೆ-ಸ್ವೀಮರ) ಸುತ್ತೋಲೆಯನ್ನು ಹೊರಡಿಸಿದ್ದರು. ಸಮ್ಮೇಳನ ಹಾಗೂ ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ/ ನೌಕರರಿಗೆ ದಿನಾಂಕ 27/02/2024ರಂದು ಒಂದು ದಿನ ಹಾಗೂ ಇತರ ಜಿಲ್ಲೆಗಳ ಅಧಿಕಾರಿ/ ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ 27/02/2024 ಮತ್ತು 28/02/2024 ರಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿತ್ತು.



logoblog

Thanks for reading Regarding grant of special casual leave to Government employees

Previous
« Prev Post

No comments:

Post a Comment

If You Have any Doubts, let me Comment Here