Order by State Government regarding implementation of Old Pension
ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧ ಈ ಕಳಕಂಡ ಷರತ್ತುಗಳಿಗೆ ಒಳಪಟ್ಟು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ.
1. ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ:30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
2. ಒಂದು ಬಾರಿ ಮಾಡಿಕೊಂಡ ಅಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
3. ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
4. ದಿನಾಂಕ:01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ:30.06.2024ರೊಳಗಾಗಿ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಹಾಗೂ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಅರ್ಹತೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮವಹಿಸತಕ್ಕದ್ದು ಎಂದು ತಿಳಿಸಲಾಗಿದೆ.
ಆದ್ದರಿಂದ ಇಚ್ಛೆಯುಳ್ಳ ಎಲ್ಲಾ ಅರ್ಹ ನೌಕರರು ಅಂತಿಮ ದಿನಾಂಕದವರೆಗೂ ಕಾಯದೆ ಈ ಪತ್ರಕ್ಕೆ ಲಗತ್ತಿಸಿದ ಅನುಬಂಧದ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಿದೆ.
No comments:
Post a Comment
If You Have any Doubts, let me Comment Here