General Election To LokSabha 2024, from Karnataka Repoll Regarding
ಚಾಮರಾಜನಗರ ಲೋಕಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಮರುಮತದಾನ ಘೋಷಿಸಲಾಗಿದೆ. ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರುಮತದಾನ ನಡೆಯಲಿದೆ.
ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚುನಾವಣೆ ನಡೆಯಲಿದೆ.
ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿ ಗಲಾಟೆ ನಡೆಸಿದ್ದ ಗ್ರಾಮಸ್ಥರು, ಮತಗಟ್ಟೆಯ ಮೇಲೆ ದಾಳಿ ನಡೆಸಿ ಇವಿಎಂ, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನದ ದಿನದಂದು ಇಂಡಿಗನತ್ತ ಮತಗಟ್ಟೆಯಲ್ಲಿ ಮತದಾನ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಏಪ್ರಿಲ್ 29ರಂದು ಮರುಮತದಾನ ನಡೆಯಲಿದೆ.
No comments:
Post a Comment
If You Have any Doubts, let me Comment Here