ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 2ನೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಲ್ಲಿ, ಹೇಗೆ ಪರಿಶೀಲಿಸಬಹುದು? ತಾತ್ಕಾಲಿಕ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡುವುದು ಹೇಗೆ ಎಂಬಿತ್ಯಾದಿ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಲು ಈ ಹಂತಗಳನ್ನು ಅನುಸರಿಸಿ.
Step-1 On your internet browser, enter the website name karresults.nic.in” and search.
Step-2 Open the result portal and select PUC 2 result 2024.
Step-3 Enter your KSEAB registration number and select the stream (subject combination).
Step-4 Submit your details and check board exam marks.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಎರಡು ವೆಬ್‌ಸೈಟ್‌ಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ, karresults.nic.in ಮತ್ತು pue.kar.nic.in. ಆನ್‌ಲೈನ್‌ನಲ್ಲಿ ತಾತ್ಕಾಲಿಕ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡುವುದು ಹೇಗೆಂಬ ಹಂತ-ಹಂತದ ಮಾಹಿತಿ ಇಲ್ಲಿದೆ.
ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಹೋಗಿ- karresults.nic.in ಅಥವಾ pue.kar.nic
ಹಂತ 2: ವೆಬ್ಸೈಟ್ನ ಮುಖಪುಟದಲ್ಲಿ KSEAB PUC ಫಲಿತಾಂಶ 2024 ಕ್ಕಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ನಿಮ್ಮ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸಿ.
ಹಂತ 4: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024 ಎಂಬ ಸಂದೇಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಹಂತ 5: ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ.
2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದಾರೆ. ಅವರು ಪ್ರಸ್ತುತ 2024 ರ ದ್ವಿತೀಯ ಪಿಯುಸಿ ಫಲಿತಾಂಶಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಮಂಡಳಿಯು ಫಲಿತಾಂಶಗಳ ಜೊತೆಗೆ, ಉತ್ತೀರ್ಣದ ಪ್ರಮಾಣ, ಟಾಪರ್ಸ್ ಮತ್ತು ಇತರ ಅಂಕಿಅಂಶಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.
2023 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರು. ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳ ಪೈಕಿ ಶೇಕಡಾ 69.05 ರಷ್ಟು ಉತ್ತೀರ್ಣರಾಗಿದ್ದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇಕಡಾ 74.67 ರಷ್ಟಿತ್ತು. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹೆಚ್ಚಳದಲ್ಲಿ ಸ್ಥಿರತೆ ಕಂಡುಬಂದಿತ್ತು.
No comments:
Post a Comment
If You Have any Doubts, let me Comment Here