Karnataka SSLC Result Date Clarification
ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಮೇ 8ರಂದು ಬೆಳಿಗ್ಗೆ 10ಕ್ಕೆ ಪ್ರಕಟವಾಗಲಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಾಲಾ ಶಿಕ್ಷಣ ಇಲಾಖೆಯು ತೆರೆ ಎಳೆದಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶದ ಪ್ರಕಟವಾಗುವ ದಿನಾಂಕದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿತ್ತು.
ಅದರ ಮಾಹಿತಿಯ ಪ್ರಕಾರ ಮೇ 8ರಂದು ಫಲಿತಾಂಶ ಪ್ರಕಟವಾಗುತ್ತೆ ಎನ್ನಲಾಗಿತ್ತು.
ಈ ಕುರಿತು ಮಂಡಳಿಯ ಅಧ್ಯಕ್ಷರೂ ಆಗಿರುವ ಐಎಎಸ್ ಅಧಿಕಾರಿ ಎನ್. ಮಂಜುಶ್ರೀ ಅವರು ಸ್ಪಷ್ಟನೆ ನೀಡಿದ್ದು, ಪರೀಕ್ಷೆಯ ಫಲಿತಾಂಶದ ಫೋಟೋ ಫೇಕ್ ಆಗಿದೆ. ವಿದ್ಯಾರ್ಥಿಗಳು, ಪೋಷಕರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದಿದ್ದಾರೆ.
ಹೌದು ವಿದ್ಯಾರ್ಥಿಗಳೇ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರೋ ಪೋಟೋ ಫೇಕ್ ಆಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ಪೋಟೋ ಫೇಕ್ ಆಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸೋ ಬಗ್ಗೆ ಅಧಿಕೃತ ಮಾಹಿತಿ ಇದು ಅಲ್ಲ. ಆ ಬಗ್ಗೆ ಶೀಘ್ರವೇ ದಿನಾಂಕ ಪ್ರಕಟಿಸೋದಾಗಿ ಸ್ಪಷ್ಟ ಪಡಿಸಿದೆ. ಸೋ ನೀವು ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಘೋಷಣೆಯ ದಿನಾಂಕವನ್ನು ಪ್ರಕಟಿಸೋವರೆಗೆ ಕಾಯಬೇಕಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರೋ ಪೋಟೋ ಬಗ್ಗೆ ಗಮನವಹಿಸಬೇಡಿ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಅಲ್ಲದೇ ಸದ್ಯದಲ್ಲೇ ಫಲಿತಾಂಶದ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ.
SSLC ಫಲಿತಾಂಶ 08-05-2024ರಂದು ಪ್ರಕಟವಾಗಲಿದೆ ಎನ್ನುವದು ಸುಳ್ಳು ಸುದ್ದಿ ಆಗಿದೆ
No comments:
Post a Comment
If You Have any Doubts, let me Comment Here