Corrigendum notification -2 for Gazetted Probationers 384 POsts- Preiliminary Examination is published
ಕರ್ನಾಟಕ ಲೋಕಸೇವಾ ಆಯೋಗವು 384 ಕೆಎಎಸ್ ಹುದ್ದೆ'ಗಳ ನೇಮಕಾತಿಗೆ ಸಂಬಂಧಿಸಿದಂತೆ 'ಪೂರ್ವಭಾವಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ.
ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ:ಪಿಎಸ್ ಸಿ 509/ಇ(1)/2023-24, ದಿನಾಂಕ:26-02-2024ರಂದು ಹೊರಡಿಸಿದ್ದು, ಸದರಿ ಅಧಿಸೂಚನೆಗೆ ದಿನಾಂಕ:02-04-2024ರಂದು ಉಲ್ಲೇಖಿತ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿ, ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:07-07-2024ರಂದು ನಡೆಸಲು ನಿಗದಿಪಡಿಸಲಾಗಿತ್ತು.
ಪ್ರಸ್ತುತ ಸದರಿ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಇ.ಪಿ.ಎಫ್.ಓ. ಪರೀಕ್ಷೆ ಇರುವುದರಿಂದ ಹಾಗೂ ಹಲವಾರು ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು. ಮುಂದೂಡುವಂತೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:21-07-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.
No comments:
Post a Comment
If You Have any Doubts, let me Comment Here