JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, April 5, 2024

KSET Final Key Answers 2023

  Jnyanabhandar       Friday, April 5, 2024
KSET Final Key Answers 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ವರ್ಷದ ಜನವರಿಯಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳ ನಂತರ ಅಂತಿಮ ಕೀ ಉತ್ತರಗಳನ್ನು ಇಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಜನವರಿ 13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 42 ವಿವಿಧ ವಿಷಯಗಳ ಪರೀಕ್ಷೆ ನಡೆಸಿತ್ತು.

ಇದಕ್ಕೆ ಸಂಬಂಧಿಸಿದ ಕೀ ಉತ್ತರಗಳನ್ನು ಜನವರಿ 29ರಂದು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 7ರ ತನಕ ಅವಕಾಶ ನೀಡಿತ್ತು. ಬಳಿಕ ಕೆಲವು ಅಭ್ಯರ್ಥಿಗಳು ದಿನಾಂಕವನ್ನು ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಫೆಬ್ರವರಿ 17ರ ತನಕ ಮುಂದೂಡಲಾಗಿತ್ತು.

ಅದರಂತೆ ಪರೀಕ್ಷಾ ಪ್ರಾಧಿಕಾರಕ್ಕೆ 23 ಪತ್ರಿಕೆಗಳ ಆಯ್ದ ಕೀ ಉತ್ತರಗಳಿಗೆ ಮಾತ್ರ ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಬಳಿಕ ವಿಷಯ ತಜ್ಞರು ಒಟ್ಟು 22 ಪತ್ರಿಕೆಗಳ ಕೆಲವು ಉತ್ತರಗಳಿಗೆ ಬದಲಾವಣೆ ಸೂಚಿಸಿದ್ದರು. ಇನ್ನು ಒಂದು ಪತ್ರಿಕೆಯಲ್ಲಿನ ಆಕ್ಷೇಪಣೆಗೆ ಯಾವುದೇ ಬದಲಾವಣೆ ತಂದಿಲ್ಲ. ಅಲ್ಲದೆ ಉಳಿದ 19 ಪತ್ರಿಕೆಗಳಿಗೆ ಯಾವುದೇ ಆಕ್ಷೇಪಣೆ ಕಂಡು ಬರದ ಹಿನ್ನೆಲೆಯಲ್ಲಿ ಕೀ ಉತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ.

"ಆಕ್ಷೇಪಣೆ ವ್ಯಕ್ತವಾದ 23 ಪತ್ರಿಕೆಗಳ ಪ್ರಶ್ನೆಗಳನ್ನು ವಿಷಯ ತಜ್ಞರು ಕೂಲಂಕುಷವಾಗಿ ಪರಿಶೀಲಿಸಿದ್ದಾರೆ. ಆ ಪೈಕಿ ಮನಃಶಾಸ್ತ್ರ ವಿಷಯವನ್ನು ಹೊರತುಪಡಿಸಿ ಉಳಿದ 22 ಪತ್ರಿಕೆಗಳ ಪರಿಷ್ಕೃತ ಕೀ ಉತ್ತರಗಳನ್ನು 28 ಮಾರ್ಚ್ 2024ರಂದು KEA ಪ್ರಕಟಿಸಿತ್ತು.

ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KSET ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದೆ.

KSET ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನ

ಹಂತ-1 ಈಗ ತೆರೆದುಕೊಳ್ಳುವ ವೆಬ್‌ಪೇಜ್‌ನ ಮೇಲ್ಭಾಗದಲ್ಲಿರುವ 'ಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ.

ಹಂತ-2 ಬಳಿಕ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023' ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಹಂತ-3 ನಂತರ ತೆರೆದ ವೆಬ್‌ಪೇಜ್‌ನಲ್ಲಿ ಕಂಡುಬರುವ 'KSET ಅಂತಿಮ ಕೀ ಉತ್ತರಗಳು' ಆಯ್ಕೆಯನ್ನು ಕ್ಲಿಕ್ ಮಾಡಿ.

ಹಂತ-4 ಆಗ ವಿಷಯವಾರು ಪರಿಷ್ಕೃತ ಕೀ ಉತ್ತರಗಳ ಲಿಂಕ್ ಕಂಡು ಬರುತ್ತದೆ.
ನೀವೂ ನೋಡಲು ಇಚ್ಛಿಸುವ ವಿಷಯದ ಕೀ ಉತ್ತರದ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
ತೆರೆದುಕೊಳ್ಳುವ ಪಿಡಿಎಫ್‌ ಪುಟದಲ್ಲಿ ಕೀ ಉತ್ತರ ಪರಿಶೀಲಿಸಿಕೊಳ್ಳಬಹುದು.


ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಒಟ್ಟು 1,17,302 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ ವಾಣಿಜ್ಯಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ಚು ಅಂದರೆ 16,000 ಜನ ತೆಗೆದುಕೊಂಡಿದ್ದರು. ಕನ್ನಡ ವಿಷಯವನ್ನು 11 ಸಾವಿರ ಮಂದಿ ಆಯ್ದುಕೊಂಡಿದ್ದರು. ಅತಿ ಕಡಿಮೆ ಅಂದರೆ 25 ಜನ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆ ಬರೆದ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6 ಆಕಾಂಕ್ಷಿಗಳಿಗೆ ಅಂತಿಮವಾಗಿ ಕೆಸೆಟ್ ಪರೀಕ್ಷೆಯ ಅರ್ಹತೆ ಸಿಗಲಿದೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಚಿತ್ರದ ಕೆಳಗೆ ಇರುವ ವಿಷಯವಾರು ಲಿಂಕ್ ಕ್ಲಿಕ್ ಮಾಡಿ
logoblog

Thanks for reading KSET Final Key Answers 2023

Previous
« Prev Post

No comments:

Post a Comment

If You Have any Doubts, let me Comment Here