1st Standard Admission age Clarification for the year 2024-25
ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.
ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿದ್ದು, ತಿದ್ದುಪಡಿಯನ್ನೇ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.
ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.
ಶಾಲೆಗೆ ಮಕ್ಕಳನ್ನು ಸೇರಿಸುವಾಗ ಜನನ ಪ್ರಮಾಣಪತ್ರ, ಆಸ್ಪತ್ರೆ ದಾಖಲೆ, ಅಂಗನವಾಡಿ, ಆರೋಗ್ಯ ಸಹಾಯಕಿಯರ ದೃಢೀಕರಣ, ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು.
No comments:
Post a Comment
If You Have any Doubts, let me Comment Here