Circular regarding Improvement & repeaters students for PU 2024 Exam-3
ಕರ್ನಾಟಕದ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈಗ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅರ್ಜಿ ಸಲ್ಲಿಕೆ ಮಾಡುವ ದಿನಾಂಕ ಘೋಷಣೆ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅಧ್ಯಕ್ಷರು ಸುತ್ತೊಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.
2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸಲಾಗಿದೆ. ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು, ಪ್ರಾಂಶುಪಾಲರುಗಳು ಸೂಚನೆಗಳನ್ನು ಪಾಲಿಸುವುದು ಎಂದು ಹೇಳಿದೆ.
2024ರ ಪರೀಕ್ಷೆ-1 ಮತ್ತು 2 ರಲ್ಲಿ ಉತ್ತೀರ್ಣರಾಗಿದ್ದು ಫಲಿತಾಂಶ ಉತ್ತಮಪಡಿಸಿಕೊಳ್ಳಲು 2024ರ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ಬರೆಯಲು ಇಚ್ಚಿಸಿದಲ್ಲಿ, ಅಂತಹ ವಿದ್ಯಾರ್ಥಿಗಳು ಫಲಿತಾಂಶ ಪಟ್ಟಿಯ ಆಧಾರದ ಮೇಲೆ ನಿಯಮಾನುಸಾರ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅರ್ಜಿಯನ್ನು ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಸಲ್ಲಿಸುವುದು.
ಸದರಿ ಪ್ರಕ್ರಿಯೆಗೆ ಮಂಡಲಿಯ ಅನುಮತಿ ಪಡೆಯುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ONLINE ಮುಖಾಂತರವೂ ಅರ್ಜಿ ಸಲ್ಲಿಸಬಹುದಾಗಿದೆ. 2024ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ/ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅವಕಾಶವಿರುವುದಿಲ್ಲ.
* ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಅಂಕಪಟ್ಟಿ ಅರ್ಜಿ (MCA) ಗಳನ್ನು ಮಂಡಲಿಯಿಂದ ನೀಡಲಾಗುವುದಿಲ್ಲ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ನೀಡಲಾಗುವ ಫಲಿತಾಂಶ ಪಟ್ಟಿಯ (RESULT SHEET) ಆಧಾರದ ಮೇಲೆ ಪರೀಕ್ಷೆ-3 ಕ್ಕೆ ನೋಂದಾಯಿಸಿಕೊಂಡು ಪರೀಕ್ಷಾ ಶುಲ್ಕ ಸ್ವೀಕರಿಸಿ ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು.
ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆ-1 ಮತ್ತು ಪರೀಕ್ಷೆ-2 ಅನ್ನು ಬರೆಯದೇ ಇರುವ ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು Online Registration ಮಾಡುವ ಮೂಲಕವೂ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ.
* ಮಾರ್ಚ್ 2024ರ ಪರೀಕ್ಷೆ-1ಕ್ಕೆ ನೋಂದಾಯಿಸಿದ್ದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-3ಕ್ಕೆ Online ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ. ನೋಂದಾಯಿಸಿಕೊಳ್ಳಲು ಮಂಡಲಿಯ ಜಾಲತಾಣ https://kseab.karnataka.gov.in ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗೆ ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ. ನೋಂದಾವಣಿಗೆ ಫ್ಲೋ ಚಾರ್ಟ್ ಅನ್ನು ಅದರಂತೆ ನೋಂದಾಯಿಸಿಕೊಳ್ಳುವುದು.
2024ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ ಅರ್ಜಿ ಅಥವಾ ಹಿಂದಿನ ಎಂ.ಸಿ.ಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಪ್ರಾಂಶುಪಾಲರು ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು.
* 2006 ರಿಂದ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ ಅರ್ಜಿ ಅಥವಾ ಹಿಂದಿನ ಎಂ.ಸಿ.ಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಸಂಬಂಧಿಸಿದ ದಾಖಲೆಗಳನ್ನು ಪ್ರಾಂಶುಪಾಲರು ದೃಢೀಕರಿಸಿ, ಮಂಡಲಿಗೆ ಸಲ್ಲಿಸುವುದು.
2024ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕ. ಪುನರಾವರ್ತಿತ ಅಭ್ಯರ್ಥಿಗಳು ಪಾವತಿಸಬೇಕಾದ ಪರೀಕ್ಷಾ ಶುಲ್ಕ
(ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಒಂದು ವಿಷಯಕ್ಕೆ 140, ಎರಡು ವಿಷಯಕ್ಕೆ 270, ಮೂರು ಅಥವಾ ಹೆಚ್ಚಿನ ವಿಷಯಗಳು 400 ರೂ.ಗಳು.
2023-24 ನೇ ಸಾಲಿನ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ONLINEನಲ್ಲಿ ಸಂದಾಯಿಸಬೇಕಾದ PORTAL ಶುಲ್ಕ ರೂ. 10.
ಫಲಿತಾಂಶ ಉತ್ತಮಪಡಿಸಿಕೊಳ್ಳಲು (IMPROVEMENT) ಪಾವತಿಸಬೇಕಾದ ಶುಲ್ಕ ಪ್ರಥಮ ಬಾರಿಗೆ ಒಂದು ವಿಷಯಕ್ಕೆ ರೂ. 175. 2024ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ನಿಗದಿಪಡಿಸಿರುವ ದಿನಾಂಕ.
ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಮಂಡಲಿಯ PU EXAM ಲಾಗಿನ್‌ನಲ್ಲಿ ಇಂದೀಕರಿಸಲು ಕೊನೆಯ ದಿನಾಂಕ ದಂಡ ರಹಿತ 23/5/2024 ರಿಂದ 28/5/2024. ದಂಡ ಸಹಿತ (ದಿನಕ್ಕೆ ರೂ. 50ರಂತೆ) 29/5/2024 ರಿಂದ 30/5/2024ರ ತನಕ.
ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕಾದ ದಿನಾಂಕ ದಂಡರಹಿತ 29/5/2024. ದಂಡ ಸಹಿತ (ದಿನಕ್ಕೆ ರೂ. 50) 31/5/2024. ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪನಿರ್ದೇಶಕರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ 30-05-2024. ದಂಡಸಹಿತ (ದಿನಕ್ಕೆ 50 ರೂ.) 1/6/2024.
No comments:
Post a Comment
If You Have any Doubts, let me Comment Here