Circular regarding taking necessary steps to increase student enrollment in government schools in the academic year 2024-25
ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳಾದ ಉಚಿತ ಪಠ್ಯಪುಸ್ತಕ, ಸಮವಸ, ಕ್ಷೀರಭಾಗ್ಯ ಸೇರಿ ಹಲವು ಯೋಜನೆಗಳು ಹಾಗೂ ವಾರ್ಷಿಕ ಕಾರ್ಯಸೂಚಿಗಳನ್ನು ಪ್ರಚಾರ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವಂತೆ ಶಾಲಾ ಶಿಕ್ಷಣ ಸೂಚಿಸಿದೆ.
ಈ ಸಂಬಂಧ 2024-25ನೇ ಸಾಲಿನಲ್ಲಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಕುರಿತು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ ನಿರ್ದೇಶನ ನೀಡಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳಾದ ಉಚಿತ ಸಮವಸ, ಪಠ್ಯಪುಸ್ತಕ, ಮಧ್ಯಾಹ್ನದ ಉಪಾಹಾರ ಯೋಜನೆ, ಕ್ಷೀರಭಾಗ್ಯ, ಶೂ ಮತ್ತು ಸಾಕ್ಸ್‌ಗಳಂತಹ ಸೌಲಭ್ಯಗಳು ಶೈಕ್ಷಣಿಕ ವರ್ಷದ ಮೊದಲ ದಿನದಂದೇ ಅಥವಾ ಶೈಕ್ಷಣಿಕ ವರ್ಷದ ಆರಂಭದಲ್ಲಿ ಲಭ್ಯವಿರುವುದನ್ನು ಖಾತರಿಪಡಿಸುವಂತೆ ತಿಳಿಸಿದ್ದಾರೆ.
ಪ್ರತಿ ಸರ್ಕಾರಿ ಶಾಲೆಗೆ ಹೊಂದಿಕೊಂಡಿರುವ ಪ್ರದೇಶಗಳ ಹಾಗೂ ಅಕ್ಕಪಕ್ಕದ ಪ್ರದೇಶಗಳ 6ರಿಂದ 14 ವರ್ಷದ ಮಕ್ಕಳು ಹತ್ತಿರದ ಶಾಲೆಗೆ ಸೇರಿರುವುದನ್ನು ಹಾಗೂ ಯಾವುದೇ ಮಗು ಸಹ ಶಾಲೆಯಿಂದ ಹೊರಗುಳಿದಿಲ್ಲ ಎಂಬ ಅಂಶವನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು.
ಮಕ್ಕಳ ಜಾಥಾ, ಶಾಲೆ ಬಿಟ್ಟ ಮಕ್ಕಳ ಮನೆ ಭೇಟಿ, ವಲಸೆ ಬಂದಿರುವ ಹಾಗೂ ಅರ್ಹ ವಯಸ್ಸಿನ ಎಲ್ಲ ಮಕ್ಕಳನ್ನು ಶಾಲೆಗೆ ಸೇರಿಸಲು ಪಾಲಕರು ಹಾಗೂ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವುದು. ದಾನಿಗಳ ಹಾಗೂ ಹಳೆ ವಿದ್ಯಾರ್ಥಿಗಳ ಸಹಾಯದಿಂದ ಬಾಳಕರಿಗೆ ಬಸ್ ಪಾಸ್ ವ್ಯವಸ್ಥೆ ಕಲ್ಪಿಸುವುದು, ಮಳೆಬಿಲ್ಲು ಕಲಿಕಾ ಹಬ್ಬ ಹಾಗೂ ಸಂಭ್ರಮ ಶನಿವಾರ ಕಾರ್ಯಕ್ರಮಗಳ ಅನುಭವದ ಆಧಾರದ ಮೇಲೆ ಮಕ್ಕಳು ಮತ್ತು ಪಾಲಕರನ್ನು ಆಕರ್ಷಿಸುವ ಕಾರ್ಯಕ್ರಮಗಳನ್ನು ಶಿಕ್ಷಕರು ಹಮ್ಮಿಕೊಳ್ಳಬೇಕು.
ದಾಖಲಾತಿ ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸುವುದು, ಸ್ಥಳೀಯ ಮಕ್ಕಳನ್ನು ಶಾಲೆಗೆ ದಾಖಲಿಸುವಂತಹ ಕಾರ್ಯಕ್ರಮಗಳನ್ನು ಎಸ್‌ಡಿಎಂಸಿ ಸಹಕಾರದೊಂದಿಗೆ ಶಾಲಾ ಮೇಲುಸ್ತುವಾರಿ ಅಧಿಕಾರಿಗಳು, ಹಾಜರಾತಿ ಅಧಿಕಾರಿಗಳು, ಆಯಾ ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಸೂಚನೆ ನೀಡಿದೆ.
No comments:
Post a Comment
If You Have any Doubts, let me Comment Here