JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Monday, May 20, 2024

Circular Related 5, 8 and 9th Class Result

  Jnyanabhandar       Monday, May 20, 2024

Analyze assessment for class 5, 8 and 9, enrolling students in next classes

ರಾಜ್ಯದ 5,8,9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕ ದಾಖಲಿಸಿ ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.


2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ಉಲ್ಲೇಖ-2ರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿರುತ್ತದೆ.


ತದನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಘನ ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು ಅಂತಿಮ ತೀರ್ಪು ಬಾಕಿ ಇರುತ್ತದೆ.


ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ದಿನಾಂಕ: 29-05-2024 ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪುಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಲ್ಲೇಖ-3ರನ್ನಯ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಆಗತ್ಯ ಕ್ರಮ ವಹಿಸುವಂತೆ ಕೋರಿರುತ್ತಾರೆ. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಈ ಕೆಳಕಂಡಂತೆ ಕ್ರಮವಹಿಸುವುದು.


ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ:8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA- 1, FA-2, FA-3, FA-4 SA-1 ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

How download file: click on given link start to download.

Where to click for download: after the given image, below there is a link which was mentioned as "Click to download "

How to find single page information: Click on the image, which was uploaded below the text, then magnifying that images to read, if you need to further use please download it.




logoblog

Thanks for reading Circular Related 5, 8 and 9th Class Result

Previous
« Prev Post

No comments:

Post a Comment

If You Have any Doubts, let me Comment Here