Karnataka Second PUC Result 2024
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಎದುರು ನೋಡುತ್ತಿರುವಂತ ಪರೀಕ್ಷೆ-2ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ. ಆ ಬಳಿಕ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ನೋಡಬಹುದಾಗಿದೆ.
ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ತಿಳಿಸಿದೆ.
ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?
ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:
karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.
No comments:
Post a Comment
If You Have any Doubts, let me Comment Here