KSET EXAM Provisional Score List 2023
ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆಸೆಟ್-2023ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ.
ಇಂದು ಕೆಇಎಯಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, KSET ಪರೀಕ್ಷೆಯ ತಾತ್ಕಾಲಿಕ ಅಂಕ ಪ್ರಕಟಿಸಲಾಗಿದೆ.
ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ KSET-2023ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದಿದೆ.
ಜನವರಿ 13ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ, ಏ.4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
41 ವಿಷಯಗಳ ಅಂಕಪಟ್ಟಿ ಇದೆ. ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ keakset2023@gmail.com ಮಾಡಬೇಕು ಎಂಬುದಾಗಿ ತಿಳಿಸಿದೆ.
TOURISM ADMINISTRATION AND MANAGEMENT
MASS COMMUNICATION & JOURNALISM
No comments:
Post a Comment
If You Have any Doubts, let me Comment Here