JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, May 29, 2024

Regarding implementation of reservation in outsourced recruitment of State Govt

  Jnyanabhandar       Wednesday, May 29, 2024
Regarding implementation of reservation in outsourced recruitment of State Govt

ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ (Reservation in Outsourcing) ಅಳವಡಿಸಲು ಒಪ್ಪಿಗೆ ನೀಡಲಾಗಿತ್ತು.

ಇದೀಗ ಅಧಿಕೃತವಾಗಿ ರಾಜ್ಯ ಸರ್ಕಾರವು ಮೀಸಲಾತಿಗೆ ಸಂಬಂಧಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್‌. ಡಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿದೆ. 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಆದ್ದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಕೆಳಕಂಡ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ:

ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ 

ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.

ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
ಈ ಮೇಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು / ಸ್ನಾಯತ್ತ ಸಂಸ್ಥೆಗಳು | ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ.


ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.

logoblog

Thanks for reading Regarding implementation of reservation in outsourced recruitment of State Govt

Previous
« Prev Post

No comments:

Post a Comment

If You Have any Doubts, let me Comment Here