JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, May 19, 2024

SSLC 2024 Exam 2 Revised Time Table

  Jnyanabhandar       Sunday, May 19, 2024
SSLC 2024 Examination-2 Revised Time Table

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2ನ್ನು ಮುಂದೂಡಿ ದಿನಾಂಕ14-06-2024 ರಿಂದ 22-06-2024ರವರೆಗೆ ನಡೆಸಲು ತೀರ್ಮಾನಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದ್ದಾರೆ.

ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

-ದಿನಾಂಕ 14-06-2024ರ ಶುಕ್ರವಾರ - ಪ್ರಥಮ ಭಾಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ.

-ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ - ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.

ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್

ದಿನಾಂಕ 19-06-2024ರ ಬುಧವಾರ - ಕೋರ್ ಸಬ್ಜೆಕ್ಟ್ - ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿರಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ.

-ದಿನಾಂಕ 20-06-2024ರ ಗುರುವಾರ- ಕೋರ್ ಸಬ್ಜೆಕ್ಟ್ - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.

-ದಿನಾಂಕ 21-06-2024ರ ಶುಕ್ರವಾರ - ದ್ವಿತೀಯ ಭಾಷೆ - ಇಂಗ್ಲೀಷ್, ಕನ್ನಡ

-ದಿನಾಂಕ 22-06-2024ರ ಶನಿವಾರ - ಕೋರ್ ಸಬ್ಜೆಕ್ಟ್ - ಸಮಾಜ ವಿಜ್ಞಾನ

☞☞☞☞☞☞☞☞

logoblog

Thanks for reading SSLC 2024 Exam 2 Revised Time Table

Previous
« Prev Post

No comments:

Post a Comment

If You Have any Doubts, let me Comment Here