SSLC Exam 2 CCTV Related Circular
2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪ್ರಸ್ತಾವನೆಯನ್ನು ಮಂಡಲಿಗೆ ಸಲ್ಲಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.
2024ರ ಪರೀಕ್ಷೆ-2ಕ್ಕೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು ಅತ್ಯಂತ ಪ್ರಮುಖ ಕಾರ್ಯವಾಗಿದೆ.
ಪರೀಕ್ಷಾ ಕೇಂದ್ರ ರಚನೆಯ ನಂತರವೇ ಪ್ರವೇಶಪತ್ರ, ಕೇಂದ್ರ ನಾಮಯಾದಿ, ಶಾಲಾವಾರು ನಾಮಯಾದಿ, ಹಾಜರಾತಿ ಸಹಿತ ಅಂಕಪಟ್ಟಿ (ಎ.ಎಂ.ಎಲ್), ಪ್ರಶ್ನೆಪತ್ರಿಕೆ ಬೇಡಿಕೆ ಹಾಗೂ ಪರೀಕ್ಷಾ ಕೇಂದ್ರದ ಸಾದಿಲ್ವಾರು ಹಂಚಿಕೆಯ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಆಯಾ ಭೌಗೋಳಿಕ ಪ್ರದೇಶದಲ್ಲಿನ ನಗರ/ಗ್ರಾಮೀಣ ಪ್ರದೇಶದ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಪರಿಗಣಿಸಿ ಕ್ಲಸ್ಟರ್‌ಸಹಿತ ಹಾಗೂ ಕ್ಲಸ್ಟರಹಿತ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.
ಪರೀಕ್ಷಾ ಕೇಂದ್ರಗಳನ್ನು ರಚಿಸುವ ಪೂರ್ವದಲ್ಲಿ ಪರೀಕ್ಷಾ ಕೇಂದ್ರದ ರಚನೆಗೆ ಸಂಬಂಧಿಸಿದಂತೆ ಜಿಲ್ಲಾ ಉಪನಿರ್ದೇಶಕರು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳನ್ನು ರಚಿಸಿದ ಪ್ರಸ್ತಾವನೆಯನ್ನು ಪಡೆದು ಕೆಳಕಂಡ ನಿಯಮಗಳನ್ನು ಪಾಲಿಸಿರುವ ಬಗ್ಗೆ ಖುದ್ದಾಗಿ ಪರಿಶೀಲಿಸಿ ಪ್ರಸ್ತಾವನೆಯನ್ನು ಮಂಡಲಿಗೆ ಸಲ್ಲಿಸಲು ಹಾಗೂ ಸಾಫ್ಟ್ ಕಾಪಿಯನ್ನು ಇ-ಮೇಲ್ ಮೂಲಕ ದಿನಾಂಕ:17-05-2024ರೊಳಗೆ ಮಂಡಲಿಗೆ ಸಲ್ಲಿಸಲು ತಿಳಿಸಿದೆ.
1. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.
2. ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಸಾಧ್ಯವಾದಷ್ಟು ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು ಕಡ್ಡಾಯ.
3. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಲ್ಲಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು ಕಡ್ಡಾಯ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಂಖ್ಯೆಯ ಕೊಠಡಿಗಳ ಆಸನದ ವ್ಯವಸ್ಥೆಗಾಗಿ ಪೀಠೋಪಕರಣಗಳು, ಶಾಲೆಯ ಸುತ್ತಾ ಕಾಂಪೌಂಡ್, ಶೌಚಾಲಯ, ಕುಡಿಯುವ ನೀರು, ಸಿಸಿಟಿವಿ ಕ್ಯಾಮರಾ ಅಳವಡಿಸಿರುವಿಕೆ, ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾರಿಗೆ ವ್ಯವಸ್ಥೆ, ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯದಲ್ಲಿ ಸುರಕ್ಷಿತವಾಗಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಲು ರಸ್ತೆ ಮಾರ್ಗ, ಮುಂತಾದ ಎಲ್ಲಾ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲಿಸುವುದು ಅತ್ಯವಶ್ಯಕವಾಗಿದೆ.
4. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರ ರಚಿಸುವುದು.
5. ಶಾಲಾ/ಕಾಲೇಜಿನಲ್ಲಿರುವ ಮೂಲಭೂತ ಸೌಕರ್ಯ ಹಾಗೂ ಕೊಠಡಿ ಸಂಖ್ಯೆಗಳನ್ನು ಆಧರಿಸಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 250 ಅಭ್ಯರ್ಥಿಗಳು ಗರಿಷ್ಠ 750 ಅಭ್ಯರ್ಥಿಗಳವರೆಗೂ ಆಸನದ ವ್ಯವಸ್ಥೆ ಇರುವ ಸಾಮರ್ಥ್ಯವನ್ನು ಪರಿಗಣಿಸಿ ಬರುವ ಶಾಲೆಗಳ ಕ್ಲಸ್ಟರ್‌ಸಹಿತ ಪರೀಕ್ಷಾ ಕೇಂದ್ರಗಳನ್ನಾಗಿ ರಚಿಸುವುದು.
6. ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೂ ವೆಬ್ ಕ್ಯಾಸ್ಟಿಂಗ್ ಇರುವುದರಿಂದ ಸರ್ಕಾರಿ/ಅನುದಾನಿತ/ಅನುದಾನರಹಿತ
ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರ ಕಡ್ಡಾಯವಾಗಿ ಅಳವಡಿಸುವ ಕುರಿತು ಅಗತ್ಯ
ಕ್ರಮವಹಿಸುವುದು.
7. ಸಿಸಿಟಿವಿ ಕ್ಯಾಮೆರಗಳು ಪರೀಕ್ಷಾ ದಿನಗಳಲ್ಲಿ 24 ಗಂಟೆಯಲ್ಲೂ ಕೆಲಸ ನಿರ್ವಹಿಸುವಂತಿರಬೇಕು.
8. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೇರ್ಪಡೆ ಮಾಡಿರುವ ಶಾಲೆಯ ಶಾಲಾ ಸಂಕೇತ, ಶಾಲೆಯ ಹೆಸರು ಮತ್ತು ಸಂಪೂರ್ಣ ಅಂಚೆ ವಿಳಾಸವನ್ನು ಸ್ಪಷ್ಟವಾಗಿ ನಮೂದಿಸುವುದು ಕಡ್ಡಾಯ.
9. ಪರೀಕ್ಷಾ ಅವ್ಯವಹಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ, ಬಹುಮಹಡಿ ಕಟ್ಟಡವಿರುವ ಪರೀಕ್ಷಾ ಕೇಂದ್ರಗಳಲ್ಲಿ ಸಾಧ್ಯವಾದಷ್ಟು ಪರೀಕ್ಷೆಗೆ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಮಾಡದೇ ಮೊದಲನೇ ಮಹಡಿಯಿಂದ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡುವುದು. ಪರೀಕ್ಷಾ ಕೇಂದ್ರದಲ್ಲಿ ವಿಕಲಚೇತನ ವಿದ್ಯಾರ್ಥಿಗಳಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಮಾಡುವುದು.
10. ಈಗಾಗಲೇ ನಿಮ್ಮ ಜಿಲ್ಲೆಯಲ್ಲಿ ಅತಿಸೂಕ್ಷ್ಮ, ಸೂಕ್ಷ್ಮ ಹಾಗೂ ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅವ್ಯವಹಾರ ಪ್ರಕರಣಗಳಿದ್ದಲ್ಲಿ, ಅಂತಹ ಕೇಂದ್ರಗಳನ್ನು ರದ್ದುಪಡಿಸುವುದು.
11. ಪರೀಕ್ಷಾ ಕೇಂದ್ರಗಳ ರಚನೆಯ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾ ಉಪನಿರ್ದೇಶಕರು(ಆಡಳಿತ), ಜಿಲ್ಲಾ ನೋಡಲ್ ಅಧಿಕಾರಿಗಳು ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಾಣಾಧಿಕಾರಿಗಳಿಗೆ ವಹಿಸಲಾಗಿದ್ದು, ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮಗಳು ನಡೆದಲ್ಲಿ, ಆಯಾ ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರನ್ನೇ ಸಂಪೂರ್ಣ ಹೊಣೆಗಾರರನ್ನಾಗಿ ಮಾಡಲಾಗುವುದು.
ಈ ಮೇಲಿನ ಎಲ್ಲಾ ಅಂಶಗಳನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿ, ಪರೀಕ್ಷಾ ಕೇಂದ್ರಗಳನ್ನು ರಚಿಸಿ, ಪ್ರಸ್ತಾವನೆಯನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ನಮೂನೆಯಲ್ಲಿ ತಯಾರಿಸಿ ಜಿಲ್ಲಾ ಉಪನಿರ್ದೇಶಕರಿಗೆ ನೀಡುವಂತೆ ಸೂಚನೆ ನೀಡಲಾಗಿದೆ.
No comments:
Post a Comment
If You Have any Doubts, let me Comment Here