SSLC Exam Date 2024
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಮೇ 9 ಅಥವಾ 10ರಂದು ಪ್ರಕಟವಾಗುವ ನಿರೀಕ್ಷೆ ಇದೆ. ಮಂಗಳವಾರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುವ ಕಾರಣ ಫಲಿತಾಂಶ ವಿಳಂಬವಾಗುತ್ತಿದೆ. ಆದಾಗ್ಯೂ, ಇದೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಅಧಿಕೃತವಾಗಿ ಘೋಷಣೆ ಮಾಡಿಲ್ಲ.
ಇಲಾಖೆಯ ವೆಬ್ಸೈಟ್ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ.
ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶದ ಹೆಸರಿನಲ್ಲಿ ನಕಲಿ ಸಂದೇಶ ಭಾನುವಾರ ಹರಿದಾಡಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಫಾರ್ವರ್ಡ್ ಆದ ಇಂತಹ ಅಸಂಬದ್ಧ ಸಂದೇಶಗಳಲ್ಲಿ ಬಗ್ಗೆ ವಿದ್ಯಾರ್ಥಿಗಳು ಎಚ್ಚರದಿಂದ ಇರಬೇಕು. ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಿದರೆ ಮಾತ್ರವೇ ಪರಿಗಣಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.
ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವ್ ವೆಬ್ಸೈಟ್ನಲ್ಲಿ ದೊರೆಯುತ್ತದೆ?
ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಫಲಿತಾಂಶ ನೋಡುವುದು, ಡೌನ್‌ಲೋಡ್ ಮಾಡುವುದು ಹೇಗೆ?
ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ
ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
ಹೊಸ ಲಾಗಿನ್ ಪುಟವು ತೆರೆಯುತ್ತದೆ
ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್‌ಲೋಡ್ ಮಾಡಿ
ಕಳೆದ ವರ್ಷ, ಕರ್ನಾಟಕ ಬೋರ್ಡ್ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಘೋಷಿಸಿತ್ತು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ 83.89 ರಷ್ಟು ದಾಖಲಾಗಿತ್ತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
No comments:
Post a Comment
If You Have any Doubts, let me Comment Here