State Govt withdraws decision to award grace marks to SSLC students
ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ಕೊಡಲಾಗಿತ್ತು. ಈ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನಿರ್ಧಾರವನ್ನು ಹಿಂಪಡೆದಿದೆ.
ದಿನಾಂಕ 16-05-2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು.
ಇಂದಿನ ಸಿಎಂ ನೇತೃತ್ವದ ಸಭೆಯಲ್ಲಿ 20 ಗ್ರೇಸ್ ಮಾರ್ಕ್ಸ್ ಅನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು. ಅಲ್ಲದೇ ಇದರಿಂದ ವಿದ್ಯಾರ್ಥಿಗಳ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗುತ್ತದೆ. ಈ ನಿರ್ಧಾರದಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯಕ್ಕೂ ತೊಂದರೆ ಆಗಲಿದೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ಅಂತಿಮವಾಗಿ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಶಿಕ್ಷಣ ಇಲಾಖೆಯ ಸಭೆಯಲ್ಲಿ ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡದಿರಲು ನಿರ್ಧಾರವನ್ನು ಕೈಗೊಳ್ಳಲಾಗಿಯಿತು.
No comments:
Post a Comment
If You Have any Doubts, let me Comment Here