About Recruitment of Backlog Posts
ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಬ್ಯಾಕ್‌ಲಾಗ್ ಹುದ್ದೆಯನ್ನು ಭರ್ತಿ ಮಾಡುವಂತೆ ಕೋರಿರುವ ಮನವಿಗೆ ಸ್ಪಂದಿಸಿದ್ದು, ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಶ್ರೀ. ಕೃಷ್ಣಮೂರ್ತಿ ಇವರು ಉಲ್ಲೇಖ- 1ರನ್ನಯ ಬ್ಯಾಕ್‌ಲಾಗ್ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಯಾವುದೇ ಬ್ಯಾಕ್ ಲಾಗ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸದೇ ಇದ್ದು ಈ ಸಂಬಂಧ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕೆಂದು ಕೋರಿರುತ್ತೀರಿ.
ಪರಿಶೀಲಿಸಲಾಗಿ ಉಲ್ಲೇಖ(2)ರ ಸರ್ಕಾರದ ಅಧಿಸೂಚನೆಯಂತೆ, ಸರ್ಕಾರದ ವಿವಿಧ ಇಲಾಖೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾಲಯಗಳು/ ಸಹಕಾರ ಸಂಸ್ಥೆಗಳು/ ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ವರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಾಧಿಕಾರಿಗಳಿಂದಲೇ ಅಧಿಸೂಚನೆ / ಪ್ರಕಟಣೆಯನ್ನು ಹೊರಡಿಸಬೇಕಾಗಿರುತ್ತದೆ
ಈ ಸಂಬಂಧವಾಗಿ, ಮಾನ್ಯ ಸಚಿವ ಸಂಪುಟದ ಉಪ ಸಮಿತಿ ಸಭೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನೂಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಗಳಲ್ಲಿ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಹಾಗೂ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ರವರ ಅದ ಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಉಲ್ಲೇಖ(3)ರ ವಿವಿಧ ದಿನಾಂಕಗಳ ಈ ಕಛೇರಿ ವತ್ರಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾಲಯಗಳು/ ಸಹಕಾರ ಸಂಸ್ಥೆಗಳು/ ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸಂಬಂಧಪಟ್ಟ ಸಕ್ಷಮ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂಬ ಅಂಶವನ್ನು ಈ ಮೂಲಕ ತಿಳಿಸಿದೆ.
☞☞☞☞☞☞
No comments:
Post a Comment
If You Have any Doubts, let me Comment Here