Circular related to downloading of SSLC 2024 Examination-2 Final Admission Ticket
2024ನೇ ಜೂನ್ ತಿಂಗಳಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ವಿತರಣೆ ಮಾಡೋದಕ್ಕೆ ಪ್ರಾರಂಭಿಸಲಾಗಿದೆ ಅಂತ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದಾರೆ.
ಅದರಲ್ಲಿ2024ನೇ ಜೂನ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವ ಗೈರು ಹಾಜರಾದ | ಪೂರ್ಣಗೊಳಿಸಲಾಗಿಲ್ಲದ [Not Completed] / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ:06.06.2024 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು ಅಂತ ತಿಳಿಸಿದ್ದಾರೆ.
ಒಂದು ವೇಳೆ ಏನಾದರೂ ವ್ಯತ್ಯಯಗಳು ಕಂಡು ಬಂದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು ಎಂದು ಹೇಳಿದ್ದಾರೆ.
ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ / ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಿಕೊಡುವುದು ಎಂದು ತಿಳಿಸಿದ್ದಾರೆ.
1. ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಯಾದಿಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ. ಇದರಿಂದ ವಿದ್ಯಾರ್ಥಿಗೆ ಆಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಳಿಯು ಇದರ ಜವಾಬ್ದಾರಿ ಹೊರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 2. ಶಾಲಾ ಲಾಗಿನ್‌ನಿಂದ ಮುದ್ರಿಸಿಕೊಂಡಿರುವ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳಿಗೆ ಕೂಡಲೇ ವಿತರಿಸುವುದು ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು.
3. ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಾಸಾದ ವಿಷಯಕ್ಕೆ ಪರೀಕ್ಷೆ ಬರೆಯುವಂತೆ ಮುದ್ರಣವಾಗಿದ್ದಲ್ಲಿ, ಪಾಸಾದ ಬಗ್ಗೆ ಚುಕ್ಕೆ ಗುರುತಿಲ್ಲದ ಫಲಿತಾಂಶ ಪಟ್ಟಿಯನ್ನು ಮುಖ್ಯಶಿಕ್ಷಕರು ದೃಢೀಕರಿಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳಿಗೆ ಕಳುಹಿಸುವುದು.
4. ಮಾರ್ಚ್/ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಶೇಕಡಾ 75ರಷ್ಟು ಹಾಜರಾತಿ ಕೊರತೆಯಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಶಾಲಾ ವಿದ್ಯಾರ್ಥಿಗಳಿಗೆ ಜೂನ್ 20240 ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ (CCEPF) ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ಸಂಬಂಧಿಸಿದ ಅಭ್ಯರ್ಥಿಗಳಿಗೆ ಮಾಹಿತಿಯನ್ನು ನೀಡುವುದು.
5. ಪ್ರವೇಶ ಪತ್ರವನ್ನು ಪಡೆಯುವಲ್ಲಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸಿ. ಪ್ರವೇಶ ಪತ್ರದಲ್ಲಿ ತಪ್ಪಿದ್ದರೇ ಸರಿ ಪಡಿಸೋದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸುವಂತೆ ಖಡಕ್ ಸೂಚನೆಯನ್ನು ಆಯಾ ಪ್ರಾದೇಶಿಕ ಶಿಕ್ಷಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
No comments:
Post a Comment
If You Have any Doubts, let me Comment Here