DCET 2024 Provisional Key Answers
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದ್ದಂತ ಡಿಸಿಇಟಿ 2024ರ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಈ ಮೂಲಕ ಡಿಸಿಇಟಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದಂತೆ ಆಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕೆಇಎ, ಡಿಸಿಇಟಿ-2024ರ ತಾತ್ಕಾಲಿಕ ಸರಿ ಉತ್ತರಗಳನ್ನು ವೆಬ್ ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು, ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ದಿನಾಂಕ 26-06-2024 ಬೆಳಿಗ್ಗೆ 11.00 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದಿದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆಗಳ ವಿವರಗಳೊಂದಿಗೆ ಹಾಗು justification ಅನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಅಂತ ತಿಳಿಸಿದೆ.
ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳು ಅಂತಿಮವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಮಾಹಿತಿ ನೀಡಿದೆ.
No comments:
Post a Comment
If You Have any Doubts, let me Comment Here