JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, June 27, 2024

existing bilingual medium schools from Class I in government higher primary schools

  Jnyanabhandar       Thursday, June 27, 2024
For the year 2024-25, in addition to the 25 existing bilingual medium schools from Class I in government higher primary schools, one more English medium [Bilingual] section is to be started.

2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ [ದ್ವಿಭಾಷಾ (Bilingual) ವಿಭಾಗವನ್ನು ಪ್ರಾರಂಭಿಸಲು ಅನುಮತಿ ನೀಡಿರುವ ಕುರಿತು.

ರಾಜ್ಯದಲ್ಲಿ ಆರಂಭವಾಗಿರುವ ದ್ವಿಭಾಷಾ ಮಾಧ್ಯಮ ಶಾಲೆಗಳಲ್ಲಿ ಅಂಗ್ಲ ಮಾಧ್ಯಮಕ್ಕೆ ಉತ್ತಮ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ 25 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಇನ್ನೊಂದು ವಿಭಾಗ ತೆರೆಯಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಈಗಾಗಲೇ 2404 ಸರ್ಕಾರಿ ಕನ್ನಡ/ಉರ್ದು ಮಾಧ್ಯಮ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದ ತರಗತಿಗಳು ಆರಂಭವಾಗಿದೆ.

ಈ ಪೈಕಿ 25 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಇನ್ನೊಂದು ತರಗತಿ ಆರಂಭಿಸಲು ಸರ್ಕಾರ ಸೂಚಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ದ್ವಿಭಾಷಾ ಮಾಧ್ಯಮದ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ [ದಿಭಾಷಾ (Bilingual)] ವಿಭಾಗವನ್ನು ಯಾವುದೇ ಆರ್ಥಿಕ ಹೊರೆಯಾಗದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಉಲ್ಲೇಖಿತ ಆದೇಶದನ್ವಯ ಅನುಮತಿ ನೀಡಿ ಆದೇಶಿಸಲಾಗಿದೆ.

ಸರ್ಕಾರದ ಉಲ್ಲೇಖಿತ ಆದೇಶದಲ್ಲಿನ ಅಂಶಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.


logoblog

Thanks for reading existing bilingual medium schools from Class I in government higher primary schools

Previous
« Prev Post

No comments:

Post a Comment

If You Have any Doubts, let me Comment Here