Good News For KAS Aspirants
2023-243 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು KPSC ಹೊರಡಿಸಿರುವ ಅಧಿಸೂಚನೆಯಲ್ಲಿ 2017-183e ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಆದೇಶವನ್ನು ಹೊರಡಿಸಿದೆ.
ಆದೇಶದಲ್ಲಿ ಹಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಮೇಲೆ ಓದಲಾದ ಆದೇಶದಲ್ಲಿ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದ್ದು ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿರುತ್ತಾರೆ.
ಪ್ರಸ್ತಾಪಿಸಿರುವ ಅಂಶಗಳನ್ನು ಸರ್ಕಾರವು ಪರಿಶೀಲಿಸಿ 2023-24 ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 26/02/2024 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲು ತೀರ್ಮಾನಿಸಿ ಕಳಕಂಡಂತೆ ಆದೇಶಿಸಿದೆ.
ಗೆಜೆಟೆಡ್ ಪ್ರೋಬೆಷನರ್ಸ್(ಕೆಎಎಸ್) ಹುದ್ದೆಗಳ ರಿಕ್ತ ಸ್ನಾನಗಳಿಗೆ ದಿನಾಂಕ: 26/02/2024 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿ ಸರ್ಕಾರವು ಆದೇಶಿಸಿದೆ.
ಮುಂದುವರೆದು, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡತಕ್ಕದ್ದು. ಈ ಆದೇಶವನ್ನು ಸಚಿವ ಸಂಪುಟದ ಘಟನೋತ್ತರ ಮಂಜೂರಾತಿ ಪಡೆಯುವ ಷರತ್ತಿಗೊಳಪಟ್ಟು ಹೊರಡಿಸಿದೆ.
No comments:
Post a Comment
If You Have any Doubts, let me Comment Here